11:55 AM Friday13 - November 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಬರ ಮಾಡಿಕೊಂಡ ರಾಜ್ಯಪಾಲೆ ಸುಧಾ ಯಾದವ್ , ಸಿಎಂ ಡಿ.ಕೆ ಶಿವಕುಮಾರ್

13/11/2026, 11:54

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ಮೋದಿ, ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲೆ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10.45ಕ್ಕೆ ಪ್ರಶಾಂತಿ ಕುಟೀರದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಬಳಿಕ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಮಧ್ಯಾಹ್ನ 12.10ರ ಸುಮಾರಿಗೆ ಅಲ್ಲಿಂದ ನಿರ್ಗಮಿಸಲಿದ್ದಾರೆ.

*500 ಮಂದಿಗೆ ಮಾತ್ರ ಪ್ರವೇಶ:*
ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮಕ್ಕೆ ಈಗಾಗಲೇ ಆಹ್ವಾನಿತರಿಗೆ ಪಾಸ್‌ಗಳನ್ನು ವಿತರಿಸಲಾಗಿದೆ. ಪಾಸ್ ಹೊಂದಿರುವವರಿಗೆ ಮಾತ್ರ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶ ನೀಡಲಾಗುತ್ತದೆ. ಪ್ರಶಾಂತಿ ಕುಟೀರದ ಆವರಣದಲ್ಲಿ ಸುಮಾರು 500 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು