10:52 PM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ: ದೇಗುಲಗಳ ಸಂದರ್ಶನ; ಗಾಣಿಗ ಸಂಗಮದಲ್ಲಿ ಭಾಗಿ

02/03/2026, 12:49

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ಭೇಟಿ ನೀಡಿ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.


ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹೆಗಾರರಾಗಿರುವ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮೊದಲಿಗೆ ಪುತ್ತೂರಿನ ಲಕ್ಷ್ಮೀದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಹಾಲಕ್ಷ್ಮೀ ದೇವಿ ಅಮ್ಮನವರ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಸಮುದಾಯದ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಇದಾದ ಬಳಿಕ ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ತೆರಳಿದರು. ಪುತ್ತೂರಿನ ಕೋಟೆಚಾ ಹಾಲ್‌ನಲ್ಲಿ ಆಯೋಜಿಸಲಾದ ಗಾಣಿಗ ಸಂಗಮದಲ್ಲಿ ವಿವಿಧ ಭಾಗಗಳಿಂದ ಸಮುದಾಯದ ಮುಖಂಡರು, ಕಾರ್ಯಕರ್ತರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಕಾರ್ಯಕ್ರಮದಲ್ಲಿ ಸಮುದಾಯದ ಏಕತೆ, ಶೈಕ್ಷಣಿಕ ಅಭಿವೃದ್ಧಿ, ಆರ್ಥಿಕ ಸಬಲೀಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಪ್ರಹ್ಲಾದ್ ಮೋದಿ ಅವರ ಆಗಮನದಿಂದ ಕಾರ್ಯಕ್ರಮಕ್ಕೆ ಹೆಚ್ಚುವರಿ ಮೆರುಗು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು