6:22 PM Friday13 - November 2026
ಬ್ರೇಕಿಂಗ್ ನ್ಯೂಸ್
ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ

ಇತ್ತೀಚಿನ ಸುದ್ದಿ

ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ ಎಂದ ಮೋದಿ

13/11/2026, 18:21

ಬೆಂಗಳೂರು(reporterkarnataka.com): ನಮ್ಮ ಮೆಟ್ರೋ ಯೋಜನೆಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ವೇದಿಕೆಯ ಮೇಲೆಯೇ ಪ್ರಸ್ತಾಪಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂಕಿಅಂಶಗಳ ಸಮೇತ ನಯವಾಗಿಯೇ ತಿರುಗೇಟು ನೀಡಿದ್ದಾರೆ.
ನಗರದ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಬಳಿಕ, ಐಐಎಂಬಿ (IIMB) ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

*ಮೆಟ್ರೋ ವಿಸ್ತರಣೆ ಮತ್ತು ರೈಲ್ವೆ ಕ್ರಾಂತಿಯ ಅಂಕಿಅಂಶ*
ಬೆಂಗಳೂರು ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ ಪ್ರಧಾನಿ ಮೋದಿ, 2014ರಲ್ಲಿ ಕೇವಲ 17 ಕಿಲೋಮೀಟರ್‌ಗೆ ಸೀಮಿತವಾಗಿದ್ದ ನಮ್ಮ ಮೆಟ್ರೋ ಜಾಲವು ಕೇಂದ್ರದ ಸಹಕಾರದಿಂದಾಗಿ ಇಂದು 100 ಕಿಲೋಮೀಟರ್ ಗಡಿ ದಾಟಿ ಶತಕ ಬಾರಿಸಿದೆ ಎಂದು ಹೆಮ್ಮೆಯಿಂದ ಹೇಳಿದರು. ಭಾಷಣದ ನಡುವೆ ಮೋದಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸುತ್ತಿದ್ದಂತೆಯೇ, ವೇದಿಕೆಯಲ್ಲಿದ್ದ ಸಿಎಂ ಹಾಗೂ ಸಂಸದ ತೇಜಸ್ವಿ ಸೂರ್ಯ ಮುಗುಳ್ನಕ್ಕರು. ಕರ್ನಾಟಕಕ್ಕೆ ಕೇಂದ್ರ ನೀಡುತ್ತಿರುವ ಕೊಡುಗೆಗಳನ್ನು ಪಟ್ಟಿ ಮಾಡಿದ ಪ್ರಧಾನಿ, ರಾಜ್ಯದ ರೈಲ್ವೆ ಬಜೆಟ್ ಅನ್ನು ನಾಲ್ಕು ಪಟ್ಟು ಹೆಚ್ಚಿಸಲಾಗಿದೆ ಎಂದರು. ವಂದೇ ಭಾರತ್ ರೈಲುಗಳು ಹಾಗೂ ಅಮೃತ್ ಭಾರತ್ ನಿಲ್ದಾಣಗಳ ಯೋಜನೆಯಿಂದಾಗಿ ರೈಲ್ವೆ ಕ್ಷೇತ್ರದಲ್ಲಿ ಹೊಸ ಕ್ರಾಂತಿಯಾಗುತ್ತಿದ್ದು, ಆಧುನಿಕಗೊಂಡ ರೈಲು ನಿಲ್ದಾಣಗಳಲ್ಲಿ ವಿಮಾನ ನಿಲ್ದಾಣದ ಮಾದರಿಯ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂದು ವಿವರಿಸಿದರು. ವಿಕಸಿತ ಕರ್ನಾಟಕದಿಂದ ವಿಕಸಿತ ಭಾರತ ನಿರ್ಮಾಣ
ವಿಕಸಿತ ಕರ್ನಾಟಕದ ಮೂಲಕವೇ ವಿಕಸಿತ ಭಾರತದ ಕನಸು ನನಸಾಗಲಿದೆ ಎಂದು ಅಭಿಪ್ರಾಯಪಟ್ಟ ಪ್ರಧಾನಿ, ತಂತ್ರಜ್ಞಾನ ಮತ್ತು ಇಂಧನ ಕ್ಷೇತ್ರದಲ್ಲಿ ದೇಶ ಸಾಧಿಸಿರುವ ಪ್ರಗತಿಯನ್ನು ಶ್ಲಾಘಿಸಿದರು. ಇಂದು ಸೆಮಿಕಂಡಕ್ಟರ್ ಚಿಪ್‌ನಿಂದ ಹಿಡಿದು ಹಡಗು ನಿರ್ಮಾಣದವರೆಗೆ ಹಾಗೂ ಕೃತಕ ಬುದ್ಧಿಮತ್ತೆಯಿಂದ (AI) ಕ್ವಾಂಟಮ್ ತಂತ್ರಜ್ಞಾನದವರೆಗೆ ಭಾರತ ದಾಪುಗಾಲು ಹಾಕುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಕೈಗೊಂಡ ದಿಟ್ಟ ನಿರ್ಧಾರಗಳಿಂದಾಗಿ ದೇಶ ಇಂಧನ ಭದ್ರತೆಯಲ್ಲಿ ಸ್ವಾವಲಂಬಿಯಾಗುತ್ತಿದ್ದು, ಪಿಎಂ ಕುಸುಮ್ ಯೋಜನೆಯಡಿ ಕರ್ನಾಟಕದ ಎಂಟು ಲಕ್ಷಕ್ಕೂ ಅಧಿಕ ರೈತರಿಗೆ ನೆರವು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

*ಬೆಂಗಳೂರಿನ ಕೊಡುಗೆ ಮತ್ತು ಅನಂತಕುಮಾರ್ ಸ್ಮರಣೆ*
2014ರಲ್ಲಿ ಆರಂಭವಾದ ‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’ ಮಂತ್ರವು ಇಂದು ಬಡ ಮತ್ತು ಮಧ್ಯಮ ವರ್ಗದವರ ಜೀವನಮಟ್ಟವನ್ನು ಸುಧಾರಿಸಿದೆ. ಹೊಸದಾಗಿ ರೂಪುಗೊಂಡಿರುವ ‘ನಿಯೋ ಮಧ್ಯಮ ವರ್ಗ’ ದೇಶದ ಆರ್ಥಿಕತೆಯ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಬಣ್ಣಿಸಿದರು. ಐಟಿ-ಬಿಟಿ ಹಾಗೂ ಟೆಕ್ ನಗರಿಯಾದ ಬೆಂಗಳೂರು ದೇಶದ ಆರ್ಥಿಕತೆಗೆ ಅಪಾರ ಕೊಡುಗೆ ನೀಡುತ್ತಿದೆ. ಇಂದು ಉದ್ಘಾಟನೆಗೊಂಡಿರುವ ಪಿಂಕ್ ಲೈನ್ ಮೆಟ್ರೋ ಮಾರ್ಗವು ನಗರದ ಸಂಚಾರ ವ್ಯವಸ್ಥೆಗೆ ಹೊಸ ಸೇತುವೆಯಾಗಲಿದ್ದು, ಸಾರ್ವಜನಿಕರ ಸಮಯ ಮತ್ತು ಹಣವನ್ನು ಉಳಿಸಲಿದೆ ಎಂದರು. ಇದಕ್ಕೂ ಮುನ್ನ, ತಮ್ಮ ಭಾಷಣದ ಆರಂಭದಲ್ಲಿ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ, ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು