10:11 PM Tuesday25 - February 2025
ಬ್ರೇಕಿಂಗ್ ನ್ಯೂಸ್
Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ನಿಂದ… Exams | ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ… ಐಎಂಎ ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಹರಿಹಾರ: ಸಚಿವ ಕೃಷ್ಣ… Basavanna | ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ… Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ… ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್… ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!?

ಇತ್ತೀಚಿನ ಸುದ್ದಿ

Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ನಿಂದ ಅತ್ಯಾಚಾರ !

25/02/2025, 22:03

ಬೆಂಗಳೂರು(reporterkarnataka.com):ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ನೆರವು ನೀಡಿಬೇಕಾಗಿದ್ದ ಪೊಲೀಸ್ ಇಲಾಖೆಯ ಕಾನ್ ಸ್ಟೇಬಲ್ ಓರ್ವ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ ಕಾನ್ ಸ್ಟೇಬಲ್ ಸಹಿತ ಇಬ್ಬರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ಠಾಣೆ ಕಾನ್‌ಸ್ಟೇಬಲ್ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಸಂತ್ರಸ್ತೆ ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಪಕ್ಕದ ಮನೆಯ ವಿವಾಹಿತ ವ್ಯಕ್ತಿಯ ಪರಿಚಯವಾಗಿತ್ತು. ಆ ವ್ಯಕ್ತಿ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ, ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಹಲ್ಲೆ ನಡೆಸಿದ್ದಾನೆ. ಈ ವಿಷಯವನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದಳು. ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದಾಗ, ಅಲ್ಲಿನ ಪೊಲೀಸ್ ಕಾನ್‌ಸ್ಟೇಬಲ್ ಅರುಣ್, ನ್ಯಾಯ ಕೊಡಿಸುವ ಭರವಸೆಯ ಜೊತೆಗೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದನು. ಈ ಮಧ್ಯೆ ಬಿಟಿಎಂ ಲೇಔಟ್‌ನ ಹೋಟೆಲ್ ಒಂದರ ಕೊಠಡಿಗೆ ಬಾಲಕಿಯನ್ನು ಕರೆಸಿಕೊಂಡ ಕಾನ್‌ಸ್ಟೇಬಲ್, ಮದ್ಯದಲ್ಲಿ ಅಮಲು ಬರುವ ಔಷಧಿ ಬೆರೆಸಿ ಕುಡಿಸಿ, ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ತನ್ನ ಬಳಿ ಇರುವ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಇಬ್ಬರು ಆರೋಪಿಗಳ ವಿರುದ್ದ ಪೋಕ್ಸೋ ಮತ್ತು ಬಿಎನ್‌ಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಮೈಕೋ ಲೇಔಟ್ ಠಾಣೆ ಪೊಲೀಸರು, ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು