3:22 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪೋಕ್ ಪಾಕಿಸ್ತಾನದ ಭಾಗವೇ ಅಲ್ಲ: ನಮಗೆ ನಿಮ್ಮ ಅವಶ್ಯಕತೆಯೇ ಇಲ್ಲ; ಪಾಕ್​ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಕಾಶ್ಮೀರ ಜನತೆ!*

01/07/2026, 21:13

ಪೋಕ್ ಪಾಕಿಸ್ತಾನದ ಭಾಗವೇ ಅಲ್ಲ: ನಮಗೆ ನಿಮ್ಮ ಅವಶ್ಯಕತೆಯೇ ಇಲ್ಲ; ಪಾಕ್​ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಕಾಶ್ಮೀರ ಜನತೆ!*

ಕಾಶ್ಮೀರ(reporterkarnataka.com): ಪಾಕ್ ಆಕ್ರಮಿತ ಕಾಶ್ಮೀರದ ಜನ ಪಾಕಿಸ್ತಾನ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ರಾವಲಕೋಟ್‌ನ ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ‘ಪಾಕ್ ಆಕ್ರಮಿತ ಕಾಶ್ಮೀರ’ ಪಾಕಿಸ್ತಾನದ ಭಾಗವಲ್ಲ ಎಂದು ಘೋಷಿಸಿದ್ದಾರೆ.
ಈ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ಜಮ್ಮು ಕಾಶ್ಮೀರ ಆವಾಮಿ ಆಯಕ್ಷನ್ ಕಮಿಟಿ ಮುಖ್ಯಸ್ಥ ಶೌಕತ್ ನವಾಜ್ ಮಿರ್ನನ್ನು ಆತನ ಇಬ್ಬರು ಸಹಚರರೊಂದಿಗೆ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಈ ಕಮಿಟಿಯ ಸುಮಾರು 600 ಜನ ಕಾರ್ಯಕರ್ತರನ್ನು ಪಾಕಿಸ್ತಾನದ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

*ಪಾಕಿಸ್ತಾನಕ್ಕೆ ನಾವು ಬೇಕು ನಮಗೆ ಪಾಕ್ ಬೇಡ!*
ರಾವಲಕೋಟ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಜಮ್ಮು ಕಾಶ್ಮೀರ ಆವಾಮಿ ಆಯಕ್ಷನ್ ಕಮಿಟಿ ನಾಯಕ ಸರ್ದಾರ್ ಅಮನ್ ಖಾನ್, ನಮಗೆ ನಿಮ್ಮ ರೇಶನ್ ಬೇಡ, ನಿಮಗೆ ಪಿಓಕೆ ಜನ ಬೇಕು. ಒಂದು ವೇಳೆ ನಮಗೆ ಬರಬೇಕಾದ ಅಗತ್ಯ ವಸ್ತುಗಳ ಬರದೇ ಹೋದರೆ, ನಾವು ಬದುಕಲು ಬೇರೆ ಮಾರ್ಗವನ್ನು ಅನುಸರಿಸಬೇಕಾಗುತ್ತದೆ ಎಂದು ಪಾಕಿಸ್ತಾನ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು