7:27 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಪೋಕ್ಸೋ ಕೋರ್ಟ್ ನ್ಯಾಯಾಧೀಶರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ನಿಖರ ಕಾರಣ ಇನ್ನೂ ನಿಗೂಢ

03/09/2022, 22:38

ಕಟಕ್(reporterkarnataka.com): ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ಕಟಕ್ ನಲ್ಲಿ ನಡೆದಿದೆ.

ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಕಟಕ್ ನಗರದ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಗೋಚರಿಸುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಟಕ್ ವಲಯ -3 ರ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ತಪಸ್ ಚಂದ್ರ ಪ್ರಧಾನ್ ತಿಳಿಸಿದರು.

ನ್ಯಾಯಾಧೀಶರ ಪತ್ನಿ ಮತ್ತು ಮಗಳು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದು, ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಅವರಿಬ್ಬರೂ ತಮ್ಮ ಕೆಲಸಗಳಲ್ಲಿ ಮಗ್ನರಾಗಿದ್ದ ಕಾರಣ ಅವರು ಹೆಚ್ಚು ಮಾತನಾಡುತ್ತಿರಲಿಲ್ಲ. ಅವರ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ನ್ಯಾಯಾಧೀಶರ ಸಹೋದರ ಸುಬೋಧ್ ಬಿಹಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು