ಇತ್ತೀಚಿನ ಸುದ್ದಿ
ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸಿದ ನರ್ಸಿಂಗ್ ವಿದ್ಯಾರ್ಥಿಯ ಬಂಧನ
20/08/2023, 20:55
ಮಂಗಳೂರು(reporterkarnataka.com): ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸುತ್ತಿದ್ದ ಆರೋಪದ ಮೇಲೆ ನಗರದ ಪ್ರತಿಷ್ಟಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಥಮ ವರ್ಷದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಬೆನೆಡಿಕ್ಟ್ ಸಾಬೂ (25) ಎಂಬಾತ ಬಂಧಿತ ಯುವಕ. ಈತ ತಾನು ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚಿಸಲು ಪ್ರಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉರ್ವ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ RAW – KERALA STATE POLICE ಮತ್ತು AGRICULTURE DEPARTMENT AND FARMERS WELFARE DEPARTMENT KERALA 60 ಐಡಿ ಕಾರ್ಡ್ ಗಳನ್ನು ಹಾಗೂ ಒಂದು ಜೊತೆ PSI ಪೊಲೀಸ್ ಸಮವಸ್ತ್ರ, ಪೊಲೀಸ್ ಶೂನ್, ಲೊಗೋ, ಮೆಡಲ್, ಬೆಲ್ಸ್ , ಕ್ಯಾಪ್ , 1 ಲ್ಯಾಪ್ ಟಾಪ್ ಮತ್ತು 2 ಮೊಬೈಲ್ ನಟ್ ಗಳನ್ನು ವಶಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಹಿನ್ನಲೆಯಲ್ಲಿ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲ್ದೀಪ್ ಜೈನ್ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪ-ಆಯುಕ್ತರಾದ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸೆಂಟ್ರಲ್ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಅವರ ಸೂಚನೆಯಂತೆ ಉರ್ವ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.