6:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಪೊಲೀಸ್ ದಾಳಿ: ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ; 6 ಮಂದಿ ಬಂಧನ

23/02/2023, 17:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

nfo.reporterkarnataka@gmail.ಕಾಂ

ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು 6 ಮಂದಿಯನ್ನು ಬಂಧಿಸಿದ್ದಾರೆ.
ಬಾಳೆಹೊನ್ನೂರು ,ಬಾಳೂರು, ಕಳಸ ಹಾಗೂ ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ.

ಪರವಾನಿಗೆ ರಹಿತ 41 , ಪರವಾನಿಗೆ ಸಹಿತ 10 ಬಂದೂಕು, ಎರಡು ರಿವಾಲ್ವರ್,22 ರೈಫಲ್ ಗುಂಡು,40 ಬುಕ್ ಶಾಟ್ ಗುಂಡು, ಬಂದೂಕು ನಳಿಕೆ, ಕಾರ್ಟ್ರೆಜ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ ನೇತ್ರಕುಂಡ ಎಸ್ಟೇಟಿನ ಸದಾಶಿವಾಚಾರ್, ಬಾಳೂರಿನ ಸುಧಾಕರ್ ಆಚಾರಿ , ಬಾಳೆಹೊನ್ನೂರಿನ ರಾಮಚಂದ್ರ ಆಚಾರಿ, ಮಾವಿನಕೆರೆಯ ಸುಂದರ, ಗಂಗಾಧರ, ಆಡುವಳ್ಳಿಯ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು