9:15 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನ್ಯಾಯಾಧೀಶರ ಭೇಟಿ ವೇಳೆ ಪೊಲೀಸ್ ಠಾಣೆಗೆ ಬಾಗಿಲು: ಇನ್ಸ್‌ಪೆಕ್ಟರ್ ಸಸ್ಪೆಂಡ್

13/01/2022, 08:54

ಚಾಮರಾಜನಗರ(reporterkarnataka.com): ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿಯವರು ಜ. 3 ರಂದು ಸಿಇಎನ್ (ಸೈಬರ್, ಎಕಾನಾಮಿಕ್ ಅಂಡ್ ನಾರ್ಕೋಟಿಕ್) ಠಾಣೆಗೆ ದಿಢೀರ್ ಭೇಟಿ ನೀಡಿದ್ದರು.

ಈ ವೇಳೆ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆಯ ಬಾಗಿಲು ಹಾಕಿಕೊಂಡಿದ್ದಾರೆ. ಆಗ ನ್ಯಾಯಾಧೀಶರು ದೂರು ಕೊಡಲು ಬಂದವರು ಏನು ಮಾಡಬೇಕು ಎಂದು ಪ್ರಶ್ನಿಸಿ ಎಸ್ಪಿಗೆ ಪತ್ರ ಬರೆದಿದ್ದರು.

ನ್ಯಾಯಾಧೀಶರ ಪತ್ರಕ್ಕೆ ಕೂಡಲೇ ಕ್ರಮ ತೆಗೆದುಕೊಂಡ ಎಸ್ಪಿ ದಿವ್ಯಾ ಸಾರಾ ಥಾಮಸ್‍ರವರು ಐಜಿಯ ಅನುಮತಿ ಪಡೆದು ನಂಜಪ್ಪ ಅವರನ್ನು ಅಮಾನತುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು