ಇತ್ತೀಚಿನ ಸುದ್ದಿ
Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ
13/04/2025, 23:23

ಹುಬ್ಬಳ್ಳಿ(reporterkarnatakaka.com): ಹುಬ್ಬಳ್ಳಿಯ ಆರೋಪಿ ನಿತೇಶ್ ಕುಮಾರ್
(35) ಎಂಬಾತನನ್ನು ಪೊಲೀಸರ ತಂಡ ಹಿಡಿದ ಬಳಿಕ ಆತ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಎಚ್ಚರಿಕೆಯ ಗುಂಡು ಹಾರಿಸಿದರೂ, ಅವನು ಓಡಿಹೋಗಲು ಪ್ರಯತ್ನಿಸಿದಾಗ ಆತನ ಮೇಲೆ ಗುಂಡು ಹಾರಿಸಲಾಯಿತು. ಆರೋಪಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆರೋಪಿ ಬಿಹಾರದ ರಾಜ್ಯದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.