3:21 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Police Flag Day | ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ

02/04/2025, 14:31

ಬೆಂಗಳೂರು(reporterkarnataka.com): ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.


ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು.
ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.
ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತು ಹಾಕಲು ಪಣ ತೊಡಬೇಕು ಎಂದು ಕರೆ ನೀಡಿದರು.
ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು ಎಂದರು.
ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.
ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಂತಿ ಪಾಲನೆ ಉತ್ತಮವಾಗಿರಬೇಕು ಎಂದು ಅವರು ನುಡಿದರು.
ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.
ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಸಿಎಂ ನುಡಿದರು.
ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.
ಗೃಹ ಸಚಿವರಾದ ಡಾ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು