11:58 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ

20/01/2024, 10:40

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com)ಮಂಗಳೂರು ನಗರ ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಸಿಪಿ ಗೀತಾ ಕುಲಕರ್ಣಿ
ಮುಖ್ಯ ಅತಿಥಿಯಾಗಿ ಕೆಎಂಸಿ ಆಸ್ಪತ್ರೆಯ ಒ ಬಿ ಜಿ ವಿಭಾಗದ
ಡಾ. ವಿದ್ಯಾಶ್ರೀ ಕಾಮತ್ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ತೆಗೆದು ಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದರು.
ಎಸಿಪಿ ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ,ಕೌನ್ಸಿಲರ್ ಸುಮನ ಪಿಂಟೋ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ಗರ್ಭ ವ್ಯವಸ್ಥೆ ಯಲ್ಲಿ ವಿಚಾಲಿತರಾಗದೆ ಒತ್ತಡ ರಹಿತವಾಗಿ ಕರ್ತವ್ಯ ನಿಭಾಸಿಕೊಳ್ಳಬೇಕು. ಮಾನಸಿಕ ಒತ್ತಡಗಳಿಗೆ ಬಲಿಯಾಗದೆ, ಅರಾಮವಾಗಿ ಮನಸ್ಸನ್ನು ಹತೋಟಿಯಲ್ಲಿಕೊಳ್ಳಬೇಕು.. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ.. ಕೆಲವು ಅಗತ್ಯ ಕ್ರಮಗಳನ್ನು ಪಾಲಿಸಿ, ಹೆಚ್ಚಿನ ಸಮಯ ನಿಂತುಕೊಂಡು ಕರ್ತವ್ಯ ನಿರ್ವಹಿಸದೆ, ಸರಿಯಾದ ನಿದ್ರೆ, ಯೋಗ ಧ್ಯಾನದಲ್ಲಿ ತೊಡಗಿಕೊಳ್ಳುವುದು ಉತ್ತಮ ಎಂದು ಅವರು ಕಾರ್ಯಗಾರದಲ್ಲಿ ಕಿವಿ ಮಾತು ಹೇಳಿದರು.


ಪಿಎಸ್ಐ ಅನಿತಾ ಸ್ವಾಗತಿದರು. ನಗರ ಪೊಲೀಸ್ ಕಚೇರಿಯ ಯೋಗ ಕ್ಷೇಮಾಧಿಕಾರಿ ಸುಶ್ಮಿತಾ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ನಗರ ವ್ಯಾಪ್ತಿಯ ವಿವಿಧ ಠಾಣಾ ಮಹಿಳಾ ಪೊಲೀಸ್ ಸಿಬ್ಬಂದಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು