4:38 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಪ್ರಮುಖ ಡಾ. ಪ್ರಭಾಕರ್ ಭಟ್ ಗೆ ಪೊಲೀಸ್ ನೋಟಿಸ್ ಖಂಡನೀಯ: ಶಾಸಕ ಡಾ. ಭರತ್ ಶೆಟ್ಟಿ

26/09/2026, 16:37

ಮಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ಸರ್ಕಾರ ದಿವಾಳಿ ಎದ್ದಿದ್ದು, ಜನರ ಗಮನ ಬೇರೆಡೆ ಸೆಳೆಯಲು ಆರ್‌ಎಸ್‌ಎಸ್ ಪ್ರಮುಖರನ್ನು ಗುರಿಯಾಗಿಸಿಕೊಳ್ಳುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ವೈ. ಶೆಟ್ಟಿ ಆರೋಪಿಸಿದ್ದಾರೆ.
ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ನೋಟಿಸ್ ನೀಡಿರುವುದು ಖಂಡನೀಯ. ಆರ್‌ಎಸ್‌ಎಸ್ ಮೇಲಿನ ದ್ವೇಷವನ್ನು ಪ್ರಸ್ತುತ ಸನ್ನಿವೇಶವನ್ನು ಬೇರೆ ಕಡೆಗೆ ತಿರುಗಿಸಲು
ಗೃಹ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷಪೂರಕವಾಗಿ ಜಾರಿಗೊಳಿಸಲು ಯತ್ನಿಸುತ್ತಿದ್ದಾರೆ. ನೋಟಿಸ್ ಜಾರಿ ಮೂಲಕ ಸಂಘಟನೆಯ ತೇಜೋಭಂಗಕ್ಕೆ ಯತ್ನಿಸಿದಂತಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆರ್‌ಎಸ್‌ಎಸ್ ಸಂಘ ಪರಿವಾರವನ್ನು ತುಳಿಯಲು ಪ್ರಯತ್ನಿಸಿದಷ್ಟು ಅದು ಬಲಾಢ್ಯವಾಗಿ ಬೆಳೆಯುತ್ತದೆ. ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೀಡಿರುವ ಪೊಲೀಸ್ ನೋಟಿಸ್‌ನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗೂಂಡಾ ಕಾಯ್ದೆಯನ್ನು ಒಂದು ವರ್ಗವನ್ನು ಸಂತೋಷಪಡಿಸಲು ಹೇರಿದಂತೆ ಕಾಣುತ್ತಿದೆ. ಸರ್ಕಾರದ ಇಂತಹ ಹಿಂದೂ ವಿರೋಧಿ ನೀತಿಗಳು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಚೇತರಿಸಿಕೊಳ್ಳಲು ಸಾಧ್ಯವಾಗದಂತೆ ಮರ್ಮಾಘಾತ ನೀಡಲಿದೆ. ಇದೀಗ ನಿಮ್ಮ ಸಮಯ, ನಮ್ಮ ಸಮಯಕ್ಕಾಗಿ ಕಾಯುತ್ತೇವೆ ಎಂದು ಹೇಳಿದ್ದಾರೆ.
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸಲು ಕಾಂಗ್ರೆಸ್ ಪರೋಕ್ಷವಾಗಿ ಪೊಲೀಸ್ ಇಲಾಖೆಯನ್ನು ಗುರಾಣಿಯಾಗಿ ಬಳಸುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗದೆ ಸ್ವಂತ ವಿವೇಚನೆಯಿಂದ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು