5:44 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪೊಲೀಸ್ ಠಾಣೆ ಎದುರು ಕಣ್ಣೀರು ಹಾಕಿದ ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ!: ತಪ್ಪಾಯ್ತು ಅಂತ ಕ್ಷಮೆಯಾಚನೆ!!

08/09/2023, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೋಮವಾರ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ
ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ ಅವರು ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಕಣ್ಣೀರು ಹಾಕಿದ್ದಾರೆ. ತನ್ನ ತಪ್ಪಿನ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.
ಅಂದು ಒಂದು ಹೇಳಿಕೆ ನೀಡಿದ್ದ ಚಂದ್ರಪ್ರಭ ಅವರು ಇಂದು ಯೂಟರ್ನ್ ಹೊಡೆದಿದ್ದಾರೆ.
ಪೊಲೀಸರ ಸೂಚನೆ ಮೇರೆಗೆ ಇಂದು ಚಿಕ್ಕಮಗಳೂರು ಠಾಣೆಗೆ ಹಾಜರಾದ ಅವರು, ನಾನು ಮಾಡಿದ ಕೆಲಸ ತಪ್ಪಾಯ್ತು ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಆತ ಕುಡಿದಿದ್ದ ಎಂದು ಹೇಳಿದ್ದೆ, ತಪ್ಪಾಯ್ತು…ಕ್ಷಮಿಸಿ, ಆತ ಕುಡಿದಿರಲಿಲ್ಲ. ಅಪಘಾತಕ್ಕೀಡಾದ ಯುವಕನ ಯೋಗಕ್ಷೇಮದ ಬಗ್ಗೆ ವಿಚಾರಿಸಬೇಕಿತ್ತು.ಆದರೆ, ವಿಚಾರಿಸಲಿಲ್ಲ, ತಪ್ಪಾಯ್ತು ಎಂದು ಚಂದ್ರಪ್ರಭ ಕ್ಷಮೆ ಕೇಳಿದರು.
ಆಸ್ಪತ್ರೆಗೆ ಹೋಗಿ ಯೋಗಕ್ಷೇಮ ವಿಚಾರಿಸುತ್ತೇನೆ. ಮಾಲತೇಶ್ ಆಸ್ಪತ್ರೆ ಖರ್ಚಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು