12:26 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಬಂಧನ; ಗಾಯಾಳು ಆಸ್ಪತ್ರೆಗೆ ದಾಖಲು

06/11/2022, 18:05

ಮಂಗಳೂರು(reporterkarnataka.com): ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕರ- ಪೋಷಕರ ಸಭೆಯಲ್ಲಿ ವ್ಯಕ್ತಿಯೊಬ್ಬ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದು,ಆರೋಪಿಯನ್ನು ಬಂಧಿಸಿದ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.

ಕಾಟಿಪಳ್ಳ ಎರಡನೇ ಬ್ಲಾಕ್‌ನ ಶಂಶುದ್ದೀನ್ ಸರ್ಕಲ್ ಬಳಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಪೋಷಕರ ಸಭೆಯ ವೇಳೆ ಮಹಮ್ಮದ್ ಹನೀಫ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾರಾಯಣ ಗುರು ಶಾಲೆಯ ಬಳಿಯ ನಿವಾಸಿ ಚಂದ್ರಕಲಾ ಎಂಬಾಕೆ ಮಹಮ್ಮದ್ ಹನೀಫ್ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಚಂದ್ರಕಲಾ ಅವರಿಗೆ ಆರೋಪಿ ಹನೀಫ್ ಪರಿಚಯವಿದ್ದು, ಪರಿಚಯದ ನೆಲೆಯಲ್ಲಿ ಹನೀಫ್ ಪತ್ನಿಗೆ ಚಂದ್ರಕಲಾ ಅವರು ಸಾಲ ನೀಡಿದ್ದರು. ಆ ಮಹಿಳೆ ಸಾಲವನ್ನು ಹಿಂತಿರುಗಿಸಿರಲಿಲ್ಲ. ಸಾಲವನ್ನು ಹಿಂತಿರುಗಿಸುವಂತೆ ಚಂದ್ರಕಲಾ ಕೇಳಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಹನೀಫ್ ಎರಡು ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಶಾಲೆಯಲ್ಲಿ ಪೋಷಕರ ಸಭೆಯ ಸಂದರ್ಭದಲ್ಲಿ ಚಂದ್ರಕಲಾ ಮತ್ತು ಹನೀಫ್ ಪತ್ನಿಯ ಮಧ್ಯೆ ಜಗಳ ನಡೆದಿದೆ.

ಈ ವೇಳೆ ಕೋಪಗೊಂಡ ಹನೀಫ್ ಏಕಾಏಕಿ ಹಲ್ಲೆ ನಡೆಸಿದ್ದು, ಶಿಕ್ಷಕಿಯ ಬಲಗೈಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ.
ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು