3:18 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್ ಸಮನ್ಸ್

28/06/2026, 21:54

ಬೆಂಗಳೂರು(reporterkarnataka.com): ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಅದರ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ಹಾಗೂ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ತುರ್ತು ಸಮನ್ಸ್ ಜಾರಿ ಮಾಡಿದೆ.
ನಗರದ 42ನೇ ಎಸಿಜೆಎಂ ನ್ಯಾಯಾಲಯವು ಇಬ್ಬರ ವಿರುದ್ಧ ದಾಖಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಗೆ ಸ್ವೀಕರಿಸಿದ್ದು, ಜುಲೈ 21ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.
ದೂರಿನ ಪ್ರಕಾರ, 2025ರ ಅಕ್ಟೋಬರ್ 14ರಂದು ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದರು ಎನ್ನಲಾಗಿದೆ. ಇದೇ ವೇಳೆ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಲಾಗಿದೆ.
ಈ ಸಂಬಂಧ ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಅವರು ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣವನ್ನು ಪರಿಶೀಲಿಸಿದ ನ್ಯಾಯಾಲಯವು ಇದೀಗ ಇಬ್ಬರಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು