ಇತ್ತೀಚಿನ ಸುದ್ದಿ
ಕೋಮು ಪ್ರಚೋದನಾಕಾರಿ ಪೋಸ್ಟ್ ಆರೋಪ: ಪೋಸ್ಟ್ ಕಾಡ್೯ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ
12/09/2025, 23:25

ಮೂಡುಬಿದಿರೆ(reporterkarnataka.com) : ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ತಂಡ ಮಹೇಶ್ ಹೆಗ್ಡೆ ಅವರನ್ನು ದಸ್ತಗಿರಿ ಮಾಡಿದೆ. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಹೇಶ್ ಹೆಗ್ಡೆ ಅವರು ತನ್ನ ಫೇಸ್ ಬುಕ್ ಖಾತೆಯಲ್ಲಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಫೋಟೋ ಬಳಸಿ ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಮೂಡುಬಿದಿರೆ ಪಿ.ಎಸ್.ಐ ಕೃಷ್ಣಪ್ಪ ಅವರ ದೂರಿನಂತೆ ಮೂಡುಬಿದಿರೆ ಠಾಣೆಯಲ್ಲಿ ಸ್ವಯಂ ಪ್ರಕರಣ ದಾಖಲಾಗಿತ್ತು.