ಇತ್ತೀಚಿನ ಸುದ್ದಿ
ಪೌರ ಕಾರ್ಮಿಕ ಕುಟುಂಬದೊಂದಿಗೆ ದೀಪಾವಳಿ ಹಬ್ಬ ಆಚರಿಸಿಕೊಂಡ ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು
06/11/2021, 11:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ.ಜಿ. ಧರ್ಮಪಾಲ್ ಅವರು ಮೂಡಿಗೆರೆ ಪಟ್ಟಣ ಪಂಚಾಯತಿಯ ವ್ಯಾಪ್ತಿಯ ಪೌರಕಾರ್ಮಿಕರ ಕುಟುಂಬಗಳೊಂದಿಗೆ ಸೇರಿ ಶುಕ್ರವಾರ ದೀಪಾವಳಿ ಹಬ್ಬ ಆಚರಿಸಿಕೊಂಡರು. ಪೌರ ಕಾರ್ಮಿಕರ ಮಕ್ಕಳಿಗೆ ಪಟಾಕಿ ಹಾಗೂ ಪುಸ್ತಕಗಳನ್ನು ವಿತರಿಸಿದರು.
ನಂತರ ಪೌರ ಕಾರ್ಮಿಕರೊಂದಿಗೆ ಸಿಹಿ ಹಂಚಿ ಸಂಭ್ರಮಿಸಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮನೋಜ್ ಹೊಸಕೆರೆ ರಮೇಶ್ ವೆಂಕಟೇಶ್ ಹಾಗೂ ಸಂಘರ್ಷ ಮೊದಲಾದವರು ಇದ್ದರು.