9:16 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಗೆ ಪವರ್ ಗ್ರಿಡ್ ಕಾರ್ಪೊರೇಷನ್‌ ಸಿಎಸ್‌ಆರ್ ನಿಧಿಯಡಿ 68 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆ ಹಸ್ತಾಂತರ

11/04/2026, 20:13

ಮಂಗಳೂರು(reporterkarnataka.com): ಮಂಗಳೂರು ನಗರದ ಲೇಡಿಗೋಶನ್ ಆಸ್ಪತ್ರೆಗೆ ಪವರ್ ಗ್ರಿಡ್ ಕಾರ್ಪೊರೇಷನ್‌ ಇಂಡಿಯಾ ತನ್ನ ಸಿಎಸ್‌ಆರ್ ನಿಧಿಯಡಿ ನೀಡಿದ ₹68.80 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಸ್ತಾಂತರಿಸಿದರು.
ನಂತರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು ಇಡೀ ರಾಜ್ಯಕ್ಕೆ ವೈದ್ಯಕೀಯ ಸೇವೆ ನೀಡುತ್ತಿವೆ.ಹಲವು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳಿಗೆ 500- 600 ಹೆರಿಗೆಗಳು ಆಗುತ್ತವೆ. ವೆನ್ಲಾಕ್ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ₹70 ಲಕ್ಷ ವೆಚ್ಚದಲ್ಲಿ ಒಪಿಡಿ ನಿರ್ಮಾಣವಾಗುತ್ತಿದೆ. ಆಸ್ಪತ್ರೆ ಕಟ್ಟಡಗಳ ನಡುವೆ ಲಿಂಕ್ ಸೇತುವೆ ನಿರ್ಮಾಣ ಆಗಬೇಕಾಗಿದೆ. ವೆನ್ಲಾಕ್ ಆಸ್ಪತ್ರೆಯ 1 ಲಕ್ಷ ಚದರ ಅಡಿ ಜಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೆಎಂಸಿ ಆಸ್ಪತ್ರೆ ಮಾಡಲಿದೆ ಎಂದರು.
ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್, ಡಿಎಚ್‌ಒ ಡಾ. ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಪ್ರಕಾಶ್, ಕೆಎಂಸಿ ಮಂಗಳೂರಿನ ಡೀನ್ ಡಾ. ಉನ್ನಿಕೃಷ್ಣನ್ ಉಪಸ್ಥಿತರಿದ್ದರು. ಪವರ್ ಗ್ರಿಡ್ ಕಾರ್ಪೊರೇಷನ್‌ನ ಅಧಿಕಾರಿ ಗಣೇಶನ್ ಡಿ. ಅವರನ್ನು ಸನ್ಮಾನಿಸಲಾಯಿತು. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ. ಆರ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು