7:07 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ಯಾತ್ರೆ ನಾಳೆ ಬೆಳಗ್ಗೆ 6ರಿಂದ: 10.30ರೊಳಗೆ ಅಂತ್ಯಕ್ರಿಯೆ

30/10/2021, 21:38

ಬೆಂಗಳೂರು(reporterkarnataka.com) ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆ ನಾಳೆ ಬೆಳಿಗ್ಗೆ 6ರಿಂದ ಆರಂಭವಾಗಲಿದ್ದು, 10.30ರೊಳಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಕುರಿತಂತೆ ರಾಜ್‌ ಕುಟುಂಬದ ಆಪ್ತರಾದ ಸಾ.ರಾ ಗೋವಿಂದ್‌ ಅವರು ಮಾಹಿತಿ ನೀಡಿದ್ದಾರೆ.

ನಾಳೆ ಬೆಳಿಗ್ಗೆ 6 ಗಂಟೆಯಿಂದ ಪಾರ್ಥೀವ ಶರೀರದ ಮೆರವಣಿಗೆ ಆರಂಭವಾಗಲಿದೆ. ಕೆ.ಆರ್. ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಮೂಲಕ, ಯಶವಂತಪುರ, ಆರ್ ಎಂ ಸಿ ಯಾರ್ಡ್, ಗೋರಗುಂಟೆಪಾಳ್ಯದ ಮೂಲಕ ಕಂಠೀರವ ಸ್ಟುಡಿಯೋವನ್ನು ತಲುಪಲಿದೆ. ಇನ್ನು ಬೆಳಿಗ್ಗೆ 10.30ರೊಳಗೆ ಕಂಠೀರವ ಸ್ಟುಡೀಯೋದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ನೆರವೇರಿಲಿದೆ ಎಂದು ಗೋವಿಂದ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು