12:59 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಸಹಿತ ಹಲವು ಗಣ್ಯರ ಸಂತಾಪ

29/10/2021, 18:07

ಬೆಂಗಳೂರು(reporterkarnataka.com): ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಕಂಠೀರವ ಸ್ಟುಡಿಯೋದಲ್ಲಿ ಸಂಜೆ 6ರಿಂದ ಆರಂಭವಾಗಲಿದೆ.

ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾದ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಕರೆದೊಯ್ಯುಷ್ಟರಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದರು. ಬೆಳಗ್ಗೆ ಸುಮಾರು 11.30ರ ವೇಳೆಗೆ ಪುನೀತ್ ಅವರು ಇಹಲೋಕ ತ್ಯಜಿಸಿದ್ದಾರೆ.

ಪುನೀತ್ ಅವರ ನೇತ್ರ ದಾನ ಮಾಡಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪಾರ್ಥಿವ ಶರೀರ ಇಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು