7:15 PM Wednesday23 - July 2025
ಬ್ರೇಕಿಂಗ್ ನ್ಯೂಸ್
ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ…

ಇತ್ತೀಚಿನ ಸುದ್ದಿ

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪ: ಸೆನ್ ಠಾಣೆಯಲ್ಲಿ‌ ವ್ಯಕ್ತಿಯ ವಿರುದ್ಧ ಕೇಸ್ ದಾಖಲು

05/08/2022, 11:22

ಬೈಂದೂರು(reporterkarnataka.com):ಮಂಗಳೂರು ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬೈಂದೂರಿನ ವ್ಯಕ್ತಿಯೋರ್ವರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರಿನಲ್ಲಿ ಕೊಲೆಯಾಗಿ ಮೃತಪಟ್ಟಿರುವ ಪ್ರವೀಣ್ ಎಂಬಾತನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ  ಬರಹವನ್ನು ಬರೆದು ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ಫಾಜಿಲ್  ಹತ್ಯೆಯ ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ಅನ್ವಯ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು