1:29 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ: ಮೇಕೆದಾಟು ಯೋಜನೆ ಪ್ರಸ್ತಾಪ, ತಮಿಳುನಾಡು ತಕರಾರು ಬಗ್ಗೆ ಆಕ್ಷೇಪ

17/07/2021, 14:53

ನವದೆಹಲಿ(reporterkarnataka news): ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಶುಕ್ರವಾರ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳು ವಿಶೇಷವಾಗಿ ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿ ಅವರು ಪ್ರಧಾನಿ ಜತೆ ಚರ್ಚಿಸಿದರು ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಂಜೆ 6.30ರ ವೇಳೆಗೆ ಸಮಯ ನಿಗದಿಪಡಿಸಲಾಗಿತ್ತು. ಪ್ರಧಾನಿ ಅವರನ್ನು ಭೇಟಿಯಾದ ಯಡಿಯೂರಪ್ಪ ಅವರು ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಅಡ್ಡಿ ಪಡಿಸುತ್ತಿರುವ ಬಗ್ಗೆ ಮೋದಿ ಅವರ ಗಮನಕ್ಕೆ ತಂದರು ಎಂದು ತಿಳಿದು ಬಂದಿದೆ. ಮೇಕೆದಾಟು ಯೋಜನೆಯ ಶಂಕುಸ್ಥಾಪನೆಗೆ ಸ್ವತಃ ಪ್ರಧಾನಿಯನ್ನೇ ಮುಖ್ಯಮಂತ್ರಿ ಆಹ್ವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು