ಇತ್ತೀಚಿನ ಸುದ್ದಿ
ಪ್ರಧಾನಿ ಭೇಟಿ: ಶಾಸಕ ವೇದವ್ಯಾಸ ಕಾಮತ್ ಮನೆ ಮನೆಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ
31/08/2022, 21:49

ಮಂಗಳೂರು(reporterkarnataka.com);ಸೆಪ್ಟೆಂಬರ್ 2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾರ್ವಜನಿಕ ಕಾರ್ಯಕ್ರಮದ ನಿಟ್ಟಿನಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಉರ್ವ ಪರಿಸರದಲ್ಲಿ ಮನೆ ಮನೆಗೆ ತೆರಳಿ ಕರಪತ್ರ ಹಂಚಿದರು.
ಈ ವಿಚಾರದ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಆಹ್ವಾನಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕರಪತ್ರ ಹಂಚುತಿದ್ದಾರೆ. ಈಗಾಗಲೇ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಗೂ ಕಾರ್ಯಕರ್ತರು ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ನಿರೀಕ್ಷೆಗೂ ಮೀರಿದ ಜನ ಸೇರಲಿದ್ದಾರೆ ಎಂದು ಹೇಳಿದರು.
ಪ್ರಧಾನಮಂತ್ರಿಗಳ ಕಾರ್ಯಕ್ರಮದ ಸಮಯ ವ್ಯತ್ಯಾಸವಾಗಿದ್ದು ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.