4:50 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಹುಟ್ಟುಹಬ್ಬ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ; ಸಂಸದ ಕ್ಯಾ. ಚೌಟ ಚಾಲನೆ

17/09/2024, 20:47

ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಕ್ತದಾನ ಮಾಡುವ ಮೂಲಕ ಆಚರಿಸಿತು.
ನಗರದ ಪಿವಿಎಸ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಎ. ಜೆ. ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವನ್ನು ದಕ್ಷಿಣ ಕನ್ನಡ‌ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಕ್ತದಾನ ಮಾಡಿದ ಬಳಿಕ ಮಾತನಾಡಿದ ಸಂಸದರು, ಪ್ರಧಾನಿ ನರೇಂದ್ರ ಮೋದಿ ಅವರು ಯುವ ನಾಯಕತ್ವದ ಮೇಲೆ ವಿಶ್ವಾಸವಿರಿಸಿಕೊಂಡವರು. ಇಂದು ಯುವಮೋರ್ಚಾ ಕಾರ್ಯಕರ್ತರ ಈ ಸಮಾಜಮುಖಿ ಕಾರ್ಯಕ್ರಮವು ನಿಜಕ್ಕೂ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸುವ ಕಾರ್ಯವಾಗಿದೆ ಎಂದು ಶುಭ ಹಾರೈಸಿದರು.
ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಗೆ 74 ಯೂನಿಟ್ ರಕ್ತ ಸಂಹ್ರಹಿಸಿ ನೀಡಲಾಗಿದೆ. ನರೇಂದ್ರ ಮೋದಿ ಅವರು ತಮ್ಮ ಜೀವನವನ್ನು ರಾಷ್ಟ್ರದ ಉನ್ನತಿಗಾಗಿ ಮುಡಿಪಾಗಿಟ್ಟಿದ್ದಾರೆ. ದೇಶದ ತೀರಾ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಿರಂತರವಾಗಿ ವಿಶೇಷವಾಗಿ ಕೊಡುಗೆ ನೀಡುವ ಮೂಲಕ ಮಾದರಿ ಆಡಳಿತ ನೀಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಅವರ ಜನ್ಮ ದಿನವನ್ನು ಸಾಮಾಜಿಕ ಸೇವೆಯ ಮೂಲಕ ಆಚರಿಸಲು ರ್ಕದಾನ ಹಮ್ಮಿಕೊಂಡಿದ್ದೇವೆ. ಜನರಿಗೆ ಅವಶ್ಯಕವಾದ ರಕ್ತದಾನದ ಮಹತ್ವವನ್ನು ತಿಳಿಸಿಕೊಡಲು ಇದು ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ರಾಕೇಶ್ ರೈ, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಮುರಳಿ ಕೊಣಾಜೆ, ನಿತೇಶ್ ಕಲ್ಲೇಗ, ಶಿಶಿರ್ ಪೆರುವಾಡಿ, ಅಶ್ವಿತ್ ಕೊಟ್ಟಾರಿ, ಕುಮಾರ್ ಪ್ರಸಾದ್, ಉಮೇಶ್ ಕುಲಾಲ್, ನಿಶಾನ್ ಪೂಜಾರಿ, ವರುಣ್ ಅಂಬಟ, ಅವಿನಾಶ್ ಸುವರ್ಣ, ನವೀನ್ ರಾಜ್, ಸಾಕ್ಷಾತ್ ಶೆಟ್ಟಿ, ಬಿಜೆಪಿ ಜಿಲ್ಲಾ ನಾಯಕರು, ಮಂಡಲ‌ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು