11:45 PM Monday13 - January 2025
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ… ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಲು ನಾರೀ ಶಕ್ತಿಯ ಬೆಂಬಲ: ಶಾಸಕಿ ಭಾಗೀರಥಿ ಮುರುಳ್ಯ

20/04/2024, 23:48

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ ಮೂರನೇ ಬಾರಿಗೆ ಅವರನ್ನು ಪ್ರಧಾನಿಯಾಗಿ ಪುನರಾಯ್ಕೆ ಮಾಡಲು ಮಹಿಳಾ ಶಕ್ತಿಯನ್ನು ಧಾರೆ ಎರೆಯುತ್ತೇವೆ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರದಲ್ಲಿ ಎಸ್‌ಸಿ ಅನುದಾನವನ್ನು 11,000 ಕೋಟಿ ರೂಗಳನ್ನು ಬೇರೆ ಕಾರ್ಯಕ್ರಮಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್‌ಸಿ ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಆ ಹಣವನ್ನು ವಾಪಸ್‌ ನೀಡಬೇಕು ಎಂದು ಅವರು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಮಾಡಿದ್ದಾರೆ. ಸುಕನ್ಯಾ ಸಮೃದ್ಧಿ ಯೋಜನೆಯಿಂದ ತೊಡಗಿ ಹುಟ್ಟಿದ ಮಗುವಿನ ಹಾಗೂ ತಾಯಿಯ ಪಾಲನೆಗಾಗಿ ಪೋಷಣ್‌ ಅಭಿಯಾನ್ ಎಂಬ ಯೋಜನೆ ಜಾರಿಗೆ ತಂದಿದ್ದಾರೆ. ಮಗುವಿನ ಜನನದ ಬಳಿಕ ಮಾತೃತ್ವದ ರಜೆಯನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ಅಲ್ಲದೆ ತಾಯಿಗೆ 6,000 ರೂ ಹಣಕಾಸಿನ ನೆರವು ಖಾತೆಗೆ ಬರುವಂತಹ ಯೋಜನೆ ಇದಾಗಿದೆ. ಉಜ್ವಲಾ ಯೋಜನೆ ಅಡಿಯಲ್ಲಿ ಉಚಿತ ಅಡುಗೆ ಅನಿಲ ಸಂಪರ್ಕ, ಜನೌಷಧಿ ಕೇಂದ್ರದ ಮೂಲಕ ಮಧ್ಯಮ ವರ್ಗ, ಬಡವರಿಗೆ ಅಗ್ಗದ ದರದಲ್ಲಿ ಔಷಧಿ ನೀಡುತ್ತಿರುವುದು, ಕೊರೊನಾ ಅವಧಿಯಲ್ಲಿ ಎಲ್ಲರಿಗೂ ಉಚಿತ ಲಸಿಕೆ ನೀಡಿರುವುದು ಸಣ್ಣ ಕಾರ್ಯವಲ್ಲ. ಪ್ರಧಾನಿ ಮೋದಿ ಅವರ ಬಗ್ಗೆ ಏನು ಬೇಕಾದರೂ ಮಾತನಾಡಬಹುದು. ಆದರೆ ಅವರಿಗೆ ಆ ಶಕ್ತಿ ಬಂದಿದ್ದು, ಅವರು ನೀಡಿದ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದರಿಂದ ಎಂಬುದನ್ನು ಮರೆಯಬಾರದು. ಇಂತಹ ನಾಯಕನನ್ನು ಮತ್ತೊಮ್ಮೆ ಪ್ರಧಾನಿಯಾಗಿ ಆರಿಸುವುದು ನಮ್ಮ ಕರ್ತವ್ಯ ಎಂದು ಶಾಸಕಿ ಹೇಳಿದರು.
ಅವರ ಋಣ ಸಂದಾಯ ಮಾಡಲು ನಮಗೊಂದು ಸದವಕಾಶ ಈಗ ಬಂದಿದೆ. ಅದನ್ನು ನಾವು ಪೂರೈಸುತ್ತೇವೆ. ಎಲ್ಲ ಮಹಿಳೆಯರೂ ಮೋದಿಯವರನ್ನು ಬೆಂಬಲಿಸುತ್ತೇವೆ ಎಂದು ಅವರು ನುಡಿದರು.
*ಲವ್‌ ಜಿಹಾದ್‌ ಮಟ್ಟಹಾಕಿ: ಕಸ್ತೂರಿ ಪಂಜ ಆಗ್ರಹ*
ಇದೇ ಸಂದರ್ಭದಲ್ಲಿ ದ.ಕ ಜಿಪಂ ಮಾಜಿ ಅಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಹುಬ್ಬಳ್ಳಿ ಧಾರವಾಡ ನಗರಪಾಲಿಕೆಯ ಕಾರ್ಪೊರೇಟರ್‍‌ನ ಮಗಳು ಸ್ನೇಹಾ ಎಂಬ ಹುಡುಗಿಯನ್ನು ಫಯಾಜ್ ಎಂಬಾತ 9 ಬಾರಿ ಇರಿದು ಕ್ರೂರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹೆಣ್ಣು ಮಕ್ಕಳು ಹೊರಗೆ ಹೋಗಲು ಹೆದರುವಂತಹ ಪರಿಸ್ಥಿತಿ ಈ ಕಾಂಗ್ರೆಸ್ ಸರಕಾರದಿಂದ ಬಂದಿದೆ. ಇದಕ್ಕೆಲ್ಲ ದೇಶದ್ರೋಹಿಗಳು, ಕ್ರಿಮಿನಲ್‌ಗಳನ್ನು ಬೆಂಬಲಿಸುವ ಕಾಂಗ್ರೆಸ್ ಸರಕಾರದ ನೀತಿಯೇ ಕಾರಣ ಎಂದು ಆರೋಪಿಸಿದರು.
ಮತಾಂಧನ ಕೃತ್ಯಕ್ಕೆ ಬಲಿಯಾದ ಹುಡುಗಿ ಕಾಂಗ್ರೆಸ್‌ನ ಕಾರ್ಪೊರೇಟರ್‍‌ನ ಮಗಳೇ ಆಗಿದ್ದರೂ ನಾವು ಪಕ್ಷಭೇದ ಮರೆತು ಈ ಕೃತ್ಯವನ್ನು ಖಂಡಿಸುತ್ತೇವೆ. ಹೆಣ್ಣನ್ನು ಕೇವಲವಾಗಿ ನೋಡುವ ಜಿಹಾದಿ ಶಕ್ತಿಗಳು, ಮತಾಂಧ ಶಕ್ತಿಗಳು ರಾಜ್ಯದಲ್ಲಿ ತಲೆ ಎತ್ತುತ್ತಿವೆ. ಜೈಶ್ರೀರಾಮ್ ಘೋಷಣೆ ಕೂಗುವಂತಿಲ್ಲ. ಅಲ್ಲಾನ ಹೆಸರು ಮಾತ್ರ ಹೇಳಬೇಕು ಎಂದು ಬೆಂಗಳೂರಿನಲ್ಲಿ ಕೆಲವು ಪುಂಡರು ಬೆದರಿಕೆಯೊಡ್ಡದ ಘಟನೆ ಮೊನ್ನೆಯಷ್ಟೇ ನಡೆದಿದೆ. ಇಂತಹ ಘಟನೆಗಳೆಲ್ಲ ಕಾಂಗ್ರೆಸ್‌ನ ಅತಿಯಾದ ತುಷ್ಟೀಕರಣದ ನೀತಿಯ ಫಲವಾಗಿದೆ ಎಂದು ಅವರು ಹೇಳಿದರು.
ಹಿಂದೂ ಹುಡುಗಿಯರನ್ನು ಯಾವತ್ತೂ ಕೆಣಕಲು ಹೋಗಬೇಡಿ ಎಂದು ಎಚ್ಚರಿಸಿದರು. ನಿನ್ನೆಯ ಘಟನೆ ಮತ್ತೆ ಮರುಕಳಿಸದಂತೆ ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ನಾರೀ ಶಕ್ತಿಗೆ ಭದ್ರತೆ ಸಿಗಬೇಕಾದರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಸುಮಾ ಶೆಟ್ಟಿ, ಉಪ ಮೇಯರ್‍‌ ಸುನೀತಾ ಹಾಗೂ ಹಿರಿಯ ನಾಯಕಿ ಕಸ್ತೂರಿ ಪಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು