11:35 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಮತದಾನ: ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ

07/05/2024, 11:38

ಅಹಮದಾಬಾದ್(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್​ನ ಅಹಮದಾಬಾದ್​ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂದು ಮತದಾನ ಮಾಡಿದರು. ಮತದಾನ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.


ಲೋಕಸಭೆ ಚುನಾವಣೆಗೆ ದೇಶದ 3ನೇ ಹಂತದಲ್ಲಿ ರಾಜ್ಯದ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಪ್ರಧಾನಿ ಮೋದಿ ಅವರ ಜತೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಗಮಿಸಿದರು.
ಪ್ರಧಾನಿ ಮೋದಿ ಅವರು ಬರುತ್ತಿದ್ದಂತೆ ಮತಗಟ್ಟೆ ಬಳಿ ನೆರದಿದ್ದ ಜನರು ಮೋದಿ ಮೋದಿ ಅಂತ ಕೂಗಲು ಆರಂಭಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ. ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು.
ಮತದಾನ ಅನ್ನೋದು ಸಾಮಾನ್ಯ ದಾನ ಅಲ್ಲ, ಶ್ರೇಷ್ಠ ದಾನಗಳಲ್ಲಿ ಒಂದು ಎಂದು ಹೇಳಿದರು.
ಮತದಾರರ ಸಕ್ರಿಯ ಭಾಗಿತ್ವ ಚುನಾವಣೆಯನ್ನು ಮತ್ತಷ್ಟು ರೋಮಾಂಚನಗೊಳಿಸುತ್ತೆ. ಮತದಾನದ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಬಿಸಿಲಿನ ತಾಪ ಹೆಚ್ಚಿದ್ದು ಮತದಾರರು ಹೆಚ್ಚು ನೀರು ಕುಡಿದು ದಣಿವಾರಿಸಿಕೊಳ್ಳಿ ಎಂದು ಪ್ರಧಾನಿ ನುಡಿದರು.
ಮಾಧ್ಯಮ ಪ್ರತಿನಿಧಿಗಳು ಹಗಲು-ರಾತ್ರಿ ಎನ್ನದೆ ಸುದ್ದಿ ಪ್ರಸಾರ ಮಾಡುತ್ತೀರಿ. ಬಿಸಿಲು ಜಾಸ್ತಿ ಇದೆ, ನಿಮ್ಮ ಆರೋಗ್ಯದ ಬಗ್ಗೆ ಲಕ್ಷ ವಹಿಸಿ. ನೀರು ಜಾಸ್ತಿ ಕುಡಿಯಿರಿ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು