3:09 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ತಯಾರಿ: ಕಡಲನಗರಿ ಮಂಗಳೂರಿನಲ್ಲಿ ಭಾರಿ ಸಿದ್ಧತೆ

25/08/2022, 18:46

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಭಾರೀ ಸಿದ್ದತೆ ನಡೆಯುತ್ತಿದೆ.

ಮೋದಿ ಅವರು ಕೇರಳ ಕೊಚ್ಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಅಲ್ಲಿಂದ ಮಂಗಳೂರಿಗೆ ಆಗಮಿಸುವರು. ನವ ಮಂಗಳೂರು ಬಂದರಿನಲ್ಲಿ ಸುಮಾರು 1200 ಕೋಟಿ ರೂ.ಗಳ ವಿವಿಧ ಕಾಮಗಾರಿಗೆ ಚಾಲನೆ ನೀಡುವರು. ನಂತರ ನಗರದ ಕೂಳೂರು ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಸೆಪ್ಟೆಂಬರ್ 2ರಂದು ಪ್ರಧಾನಿ ಮಂಗಳೂರಿಗೆ ಆಗಮಿಸುವರು.
ಪ್ರಧಾನಮಂತ್ರಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು
ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು