4:59 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ:  ಕೆಂಪುಕೋಟೆಯಲ್ಲಿ ಪೊಲೀಸ್ ಭದ್ರತೆ ಹೇಗಿದೆ..?

14/08/2022, 12:39

ಹೊಸದಿಲ್ಲಿ(reporterkarnataka.com)
ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೆಂಪುಕೋಟೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.

ಈ ಸಮಾರಂಭದಲ್ಲಿ 7000 ಮಂದಿ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ, 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಹುಹಂತಗಳ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈ ಬಾರಿ ಮುಖ ಗುರುತಿಸುವ ವ್ಯವಸ್ಥೆ (ಎಫ್‌ಆರ್‌ಎಸ್) ಕ್ಯಾಮರಾಗಳನ್ನು ಕೂಡಾ ಕೆಂಪುಕೋಟೆ ಪ್ರವೇಶಿಸುವ ದ್ವಾರದ ಬಳಿ ಸ್ಥಾಪಿಸಲಾಗಿದೆ. ಪ್ರದೇಶದಲ್ಲಿ ರಾಡಾರ್‌ಗಳನ್ನು ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ. 

ನಾವು ಅತ್ಯಂತ ನಿಖರತೆಯ ಭದ್ರತಾ ಕ್ಯಾಮರಾಗಳನ್ನು ಕೆಂಪುಕೋಟೆಯ ಸುತ್ತ ಸ್ಥಾಪಿಸಿದ್ದೇವೆ. ಇದರ ದಿನದ 24 ಗಂಟೆಗಳ ಕಾಲವೂ ನಿಗಾ ಇಟ್ಟಿದ್ದೇವೆ. ಈ ಬಾರಿ ಅತಿಥಿಗಳ ಸಂಖ್ಯೆ 7000 ಕ್ಕೇರಿದೆ. ಪ್ರವೇಶ ದ್ವಾರದಲ್ಲಿ ಎಫ್‌ಆರ್‌ಎಸ್ ಕ್ಯಾಮರಾಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

*ಏನೆಲ್ಲ ನಿಷೇಧ..?

ಬುತ್ತಿ, ನೀರಿನ ಬಾಟಲಿ, ರಿಮೋಟ್ ಕಂಟ್ರೋಲ್ ಕಾರ್ ಕೀ, ಸಿಗರೇಟ್ ಲೈಟರ್, ಬ್ರೀಫ್‌ಕೇಸು, ಕೈ ಚೀಲ, ಕ್ಯಾಮರಾ, ಬೈನಾಕ್ಯುಲರ್, ಕೊಡೆಗಳು ಮತ್ತು ಇತರ ವಸ್ತುಗಳನ್ನು ಕೆಂಪುಕೋಟೆಯ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ . ಗಾಳಿಪಟ. ಬಲೂನ್, ಚೀನಾ ಲಾಂದ್ರಗಳನ್ನು ಆ.13ರಿಂದ 15ರಂದು ಕಾರ್ಯಕ್ರಮ ಮುಗಿಯುವವರೆಗೆ ಹಾರಿಸುವಂತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು