10:52 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಪ್ರಧಾನಿ ನಾಳೆ ಮಂಗಳೂರಿಗೆ: 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

01/09/2022, 20:11

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ  ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು