ಇತ್ತೀಚಿನ ಸುದ್ದಿ
ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ: ತಾಯಿ ಹೀರಾಬೆನ್ ಮೋದಿ ವಿಧಿವಶ
30/12/2022, 09:22

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು ವಿಧಿವಶರಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರಿಗೆ 99 ವರ್ಷ ವಯಸ್ಸಾಗಿತ್ತು.