ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ ಗೆ ಶತಕದ ಸಂಭ್ರಮ: ಬಿಜೆಪಿ ರಾಜ್ಯಾಧ್ಯಕ್ಷರ ಜತೆ ಮಂಗಳೂರು ಉತ್ತರ ಅಭ್ಯರ್ಥಿ ಡಾ.ಭರತ್ ಶೆಟ್ಟಿ ವೀಕ್ಷಣೆ
30/04/2023, 15:23
ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿಜಿ ಅವರ ಮನ್ ಕಿ ಬಾತ್ 100ನೇ ಸಂಚಿಕೆಯ ಪ್ರಸಾರವನ್ನು ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜತೆ ವೀಕ್ಷಿಸಿದರು.




ನಗರದ ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ
ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಮನ್ ಕಿ ಬಾತ್ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.














