9:38 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ರೋಡ್‌ ಶೋ: 14ರಂದು ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭ; ಸಾರ್ವಜನಿಕ ಸಮಾವೇಶ ಇಲ್ಲ

10/04/2024, 20:45

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್‌ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಏ. 14ಕ್ಕೆ ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭಿಸಿ ಪಿವಿಎಸ್‌ ವೃತ್ತದ ಮೂಲಕ ಹಂಪನಕಟ್ಟೆ ಸಿಗ್ನಲ್‌ ತನಕ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರೋಡ್‌ ಶೋ ನಡೆಸುವುದೆಂದು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅಗತ್ಯ ಅನುಮತಿಗಳನ್ನು ಪಡೆಯಲಾಗಿದ್ದು, ಭದ್ರತೆಗಾಗಿ ಪೊಲೀಸ್ ಇಲಾಖೆಯ ಜತೆಗೆ ಸಂವಹನ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ ಕಾರ್ಯಕರ್ತರು, ಬೆಂಬಲಿಗರು ಬಹು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮೂಡುಬಿದಿರೆ, ಮಂಗಳೂರು ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚು ಕಾರ್ಯಕರ್ತರನ್ನು ಸೇರಿಸುವ ಯೋಜನೆ ಮಾಡಲಾಗಿದೆ. ಬೂತ್ ಮಟ್ಟದ ಪಕ್ಷದ ಕಾರ್ಯಗಳು ಪ್ರಗತಿಯಲ್ಲಿರುವ ಕಾರಣ ಉಳಿದ ನಾಲ್ಕು ಕ್ಷೇತ್ರಗಳಿಗೆ ಈ ವಿಷಯದಲ್ಲಿ ಹೆಚ್ಚಿನ ಗುರಿ ನಿಗದಿ ಮಾಡಿಲ್ಲ. ಈ ಭಾಗಗಳಿಂದಲೂ ಬಿಜೆಪಿ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಲಾಗುವುದು ಎಂದು ಜಿಲ್ಲಾ ಅಧ್ಯಕ್ಷರು ತಿಳಿಸಿದರು.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲೆಯ ಎಲ್ಲಾ ಮುಖಂಡರು, ರಾಜ್ಯ ನಾಯಕರು, ಪದಾಧಿಕಾರಿಗಳು, ಹಿತೈಷಿಗಳು ಭಾಗವಹಿಸುತ್ತಾರೆ. ಪಕ್ಷದ ರಾಜ್ಯ ಚುನಾವಣಾ ಸಂಚಾಲಕರಾದ ಜಗದೀಶ್ ಹಿರೇಮನಿಯವರು ಈಗಾಗಲೇ ನಮ್ಮ ಜತೆಗಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ಹಂಚುವ ಮೂಲಕ ಮೋದಿ ಅವರಿಗೆ ಹೃತ್ಪೂರ್ವಕ ಸ್ವಾಗತ ಕೋರಲು ಸಿದ್ಧತೆ ನಡೆದಿದೆ. ಒಟ್ಟು 2ರಿಂದ 2.5 ಕಿ.ಮೀ ಉದ್ದಕ್ಕೆ ರೋಡ್‌ ಶೋ ನಡೆಯಲಿದೆ ಎಂದು ಸತೀಶ್ ಕುಂಪಲ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಸಂಚಾಲಕ ಜಗದೀಶ್ ಹಿರೇಮನಿ, ಜಿಲ್ಲಾ ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ, ಬಂಟ್ವಾಳ ಕ್ಷೇತ್ರದ ಚುನಾವಣಾ ಉಸ್ತುವಾರಿ ಜಗದೀಶ್ ಶೇಣವ, ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದ್ರೆ, ಹಾಗೂ ಕಸ್ತೂರಿ ಪಂಜ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು