5:01 PM Friday9 - January 2026
ಬ್ರೇಕಿಂಗ್ ನ್ಯೂಸ್
ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು

ಇತ್ತೀಚಿನ ಸುದ್ದಿ

ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

09/01/2026, 15:54

ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಹೊಟೇಲ್ ಲಲಿತ್ ಅಶೋಕದಲ್ಲಿ ಗುರುವಾರ ಆಯೋಜಿಸಿದ್ದ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಪಕ್ಷದ ವತಿಯಿಂದ ನಡೆಸಬೇಕಾದ ಹೋರಾಟದ ಬಗ್ಗೆ ಚರ್ಚಿಸಲು ಪಕ್ಷದ ಸಚಿವರು, ಸಂಸದರು, ಶಾಸಕರು ಹಾಗೂ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಕೇಂದ್ರ ಸರ್ಕಾರದ ಈ ಹೊಸ ಕಾಯ್ದೆ ಜಾರಿ ಕಷ್ಟ. ಮನರೇಗಾ ಯೋಜನೆಯಲ್ಲಿ ಕಾಮಗಾರಿ ಆಯ್ಕೆ ಮಾಡುವ ಅಧಿಕಾರ ಪಂಚಾಯಿತಿಗಳ ಬಳಿ ಇತ್ತು. ಈಗ ದೆಹಲಿಯಿಂದ ತೀರ್ಮಾನ ಆಗುತ್ತದೆ. ಶೇಕಡಾ 40ರಷ್ಟು ಅನುದಾನ ಭರಿಸಲು ಯಾವುದೇ ರಾಜ್ಯಗಳಿಂದ ಸಾಧ್ಯವಿಲ್ಲ. ಈ ವಿಚಾರವಾಗಿ ಕೇಂದ್ರ ಸರ್ಕಾರ ತೀರ್ಮಾನ ಮಾಡುವ ಮುನ್ನ ರಾಜ್ಯಗಳ ಅಭಿಪ್ರಾಯ ಪಡೆಯಬೇಕಿತ್ತು. ರಾಜ್ಯಗಳ ಅಭಿಪ್ರಾಯ ಪಡೆಯದೇ ಈ ತೀರ್ಮಾನ ಮಾಡಿದ್ದಾರೆ. ಇದರ ವಿರುದ್ಧ ನಾವು ನಾಯ್ಯಾಲಯದ ಮೆಟ್ಟಿಲೇರುತ್ತೇವೆ. ಜತೆಗೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸುತ್ತೇವೆ. ಪ್ರತಿ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದು ಹೇಳಿದರು.
ಇದು ಉದ್ಯೋಗ ಹಕ್ಕಿನ ವಿಚಾರ. ಜೀವನೋಪಾಯದ ಅಧಿಕಾರ ಮೊಟಕು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಲ್ಲಿ ಯಾವುದೇ ಪಂಚಾಯ್ತಿಯಾದರೂ ಇದನ್ನು ಅರಗಿಸಿಕೊಳ್ಳಲು ಆಗದು. ಎಲ್ಲಾ ಪಂಚಾಯಿತಿಯಲ್ಲಿ ಈ ಕಾಯ್ದೆ ವಿರುದ್ಧ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.

*ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:*
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಜಾಹೀರಾತು ನೀಡಿರುವುದು ತಪ್ಪು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸವೇ ಗೊತ್ತಿಲ್ಲ. ಇದು ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಆರಂಭವಾದ ಪತ್ರಿಕೆ. ಇದು ದೇಶದ ಇತಿಹಾಸದ ಭಾಗವಾಗಿದೆ. ಪ್ರಹ್ಲಾದ್ ಜೋಷಿ ಅವರಾಗಲಿ, ಅವರ ಪಕ್ಷವಾಗಲಿ ಯಾವುದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿಲ್ಲ. ಅವರು, ಅವರ ಪಕ್ಷದವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಹೀಗಾಗಿ ಅವರಿಗೆ ಅರಿವಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದು ಕಾಂಗ್ರೆಸ್ ಪಕ್ಷ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು