4:55 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

01/11/2023, 19:08

ಮಂಗಳೂರು(reporterkarnataka.com): ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಸಹಭಾಗಿತ್ವದಲ್ಲಿ ಸಹಕಾರದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ 50ನೇ ಉಚಿತ ವೈದ್ಯಕಿಯ ತಪಾಸಣಾ ಶಿಬಿರ ಆರೋಗ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಭಯ ಮುಕ್ತ ವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು. ಈ ರೀತಿಯ ವಾತವರಣ ನಿರ್ಮಿಸಲು ಸರಕಾರ ಸಹಕಾರ ಅಗತ್ಯ. ಹೆಚ್ಚುತ್ತಿರುವ ಸಾಮಾಜಿಕ ಜಾಲ ತಾಣಗಳ ನಡುವೆ ಪತ್ರಿಕೆಗಳು ಜನರಿಗೆ ನೈಜ ಸುದ್ದಿಗಳನ್ನು ನೀಡುವಲ್ಲಿ ಇಂದಿಗೂ ವಿಶ್ವಾಸವನ್ನು ಉಳಿಸಿಕೊಂಡಿದೆ ಎಂದು ದಿನೇಶ್ ಗುಂಡೂರಾವ್ ನುಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಅಭಯಚಂದ್ರ ಜೈನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ , ಎ.ಜೆ. ಆಸ್ಪತ್ರೆಯ ವೈದ್ಯ ರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್., ಮಾಧ್ಯಮ ಅಕಾಡೆಮಿಯ ಮಾಜಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ, ರಾಜ್ಯ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಕಾರ್ಯಕ್ರಮ ಸಂಯೋಜಕ ಭಾಸ್ಕರ ರೈ ಕಟ್ಟಾ,ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಆನಂದ ಶೆಟ್ಟಿ,ಅನ್ನು ಮಂಗಳೂರು ಪದಾಧಿಕಾರಿಗಳಾದ ಹಿಲರಿ ಕ್ರಾಸ್ತಾ, ಆರಿಫ್ ಪಡುಬಿದ್ರಿ, ವಿಲ್ಫ್ರೆಡ್ ಡಿ ಸೋಜ, ರಾಜೇಶ್ ದಡ್ಡಂಗಡಿ, ಅಶೋಕ್ ಶೆಟ್ಟಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ, ಮೊದಲಾದವರು ಉಪಸ್ಥಿತರಿದ್ದರು. ಚೇತನ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು