1:10 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ

01/09/2021, 21:14

ಮಂಗಳೂರು(Reporterkarnataka.com)

ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ.

ಬಜಪೆ ಠಾಣೆಯ ಹೆಡ್ ಕಾನ್ಸಟೇಬಲ್ ಗೋಪಾಲಕೃಷ್ಣರವರು ತಮ್ಮ ಕರ್ತವ್ಯ ಮುಗಿಸಿ ತೆರಳುತ್ತಿರುವ ಸಮಯದಲ್ಲಿ ಮಂಗಳೂರು ಏರ್ಪೋರ್ಟ್ ನಿರ್ಗಮನ ರಸ್ತೆಯ ಜಂಕ್ಷನ್‌ನಲ್ಲಿ ಬೈಕ್, ಸ್ಕೂಟರ್ ಡಿಕ್ಕಿಯಾಗಿ ಪ್ರಜ್ಞಾಹೀನಸ್ಥಿತಿಯಲ್ಲಿ ಬಿದ್ದಿದ್ದ ಅಮನುಲ್ಲಾ ಎಂಬುವವರನ್ನು ಕೂಡಲೇ ತನ್ನದೇ ಕಾರಿನಲ್ಲಿ ಸ್ಥಳೀಯರ ಸಹಾಯದಿಂದ ಎ ಜೆ ಹಾಸ್ಪಿಟಲ್ ಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.

ಈ ವಿಚಾರವನ್ನು ಮಂಗಳೂರು ಸಿಟಿ ಪೋಲಿಸ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಅನೇಕರು ಗೋಪಾಲಕೃಷ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು