4:08 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: ಸಮಗ್ರ ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

29/04/2024, 12:24

ಬೆಂಗಳೂರು(reporterkarnataka.com): ಹಾಸನದ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಸಂಬಂಧಿಸಿದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.
ಈ ಕುರಿತು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ ಅವರು ಪತ್ರಿಕಾ ಪ್ರಕಟನೆ ಹೊರಡಿಸಿ,
ದೇಶದಾದ್ಯಂತ ವೈರಲ್ ಆಗುತ್ತಿರುವ ಹಾಸನ ರಾಜಕಾರಣಿಯ ಪೆನ್ ಡ್ರೈವ್ ವೀಡಿಯೋ ಪ್ರಕರಣ ಪೈಶಾಚಿಕ ಕೃತ್ಯವಾಗಿದೆ. ಇದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ.
ಬೇಲಿಯೇ ಎದ್ದು ಹೊಲ ಮೇಯ್ದಂತೆ, ಓರ್ವ ಜನಸೇವಕನಾಗಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸಬೇಕಾದ ರಾಜಕಾರಣಿಗಳ ಸುಪರ್ದಿಯಲ್ಲೂ ಹೆಣ್ಣು ಸುರಕ್ಷಿತಳಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.
ತಾನೋರ್ವ ಘನತೆವೆತ್ತ ಸ್ಥಾನದಲ್ಲಿರುವ ಜನಪ್ರತಿನಿಧಿ ಎಂಬುದನ್ನು ಮರೆತು, ಆಮಿಷ, ಬೆದರಿಕೆಗಳ ಮೂಲಕ
ಸುಮಾರು ಎರಡು ಸಾವಿರದಷ್ಟು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿದ್ದೇ ಅಲ್ಲದೆ, ಅದನ್ನು ಸ್ವತಃ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದಿರುವ ಈ ರಾಜಕಾರಣಿಯನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯವೊದಗಿಸಬೇಕು. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿಸಿ, ಆಕೆಯ ಸ್ವಾಭಿಮಾನ, ಘನತೆ, ಗೌರವಗಳೊಂದಿಗೆ ಚೆಲ್ಲಾಟವಾಡಿರುವ ಈ ಅಪ್ರಬುದ್ಧ ರಾಜಕಾರಣಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವೀಡಿಯೋವನ್ನು ಪೆನ್ ಡ್ರೈವಿನಿಂದ ಪ್ರಸಾರ ಮಾಡಿದವರನ್ನೂ ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು.ಇದಕ್ಕಾಗಿ ವಿಶೇಷ ಕ್ಷಿಪ್ರ ತನಿಖಾ ತಂಡ ರಚಿಸಿ ಸಂತ್ರಸ್ತರಿಗೆ ಅಗತ್ಯ ಕಾನೂನು ಸಹಕಾರ, ಭದ್ರತೆ ಖಾತ್ರಿಪಡಿಸಬೇಕು. ವೈರಲ್ ಆಗುತ್ತಿರುವ ವೀಡಿಯೋ ಪ್ರಸಾರವನ್ನು ತಕ್ಷಣ ತಡೆಹಿಡಿಯುವ ವ್ಯವಸ್ಥೆಯನ್ನು ಮಾಡಬೇಕೆಂದು ಫಾತಿಮಾ ನಸೀಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು