ಇತ್ತೀಚಿನ ಸುದ್ದಿ
ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
02/05/2024, 20:48
ಶಿವಮೊಗ್ಗ(reporterkarnataka.com): ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಸುಮಾರು 400 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಇದು ಸೆಕ್ಸ್ ಸ್ಕ್ಯಾಂಡಲ್ ಅಲ್ಲ, ಮಾಸ್ ರೇಪ್. ಪ್ರಜ್ವಲ್ ಪರ ಮತಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು.
ಶಿವಮೊಗ್ಗದ ಅಲ್ಲಮ ಪ್ರಭು ಕ್ರೀಡಾಂಗಣದಲ್ಲಿ ಆಯೋಜಿಸಿದ ಕಾಂಗ್ರೆಸ್ ಪಕ್ಷ ಪ್ರಜಾಧ್ವನಿ-2 ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಜ್ವಲ್ ರೇವಣ್ಣ ಅವರ ಕೃತ್ಯ ಬಗ್ಗೆ ಸ್ಪಷ್ಟ ಅರಿವಿದ್ದರೂ ಬಿಜೆಪಿ ಪಕ್ಷವು ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಜ್ವಲ್ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಹಿಂದೂಸ್ತಾನದ ಪ್ರತಿಯೊಬ್ಬ ಮಹಿಳೆಯಲ್ಲೂ ಕ್ಷಮೆ ಕೇಳಬೇಕು. ಹಿಂದೂಸ್ತಾನದ ಪ್ರಧಾನಿ ಒಬ್ಬ ಮಾಸ್ ರೇಪಿಸ್ಟ್ ಪರ ಮತಯಾಚನೆಗೆ ಬಂದಿದ್ದಾರೆ ಎಂದರೆ ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಎಂದು ಅರ್ಥ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆ ಕೇಳಬೇಕು ಎಂದರು.
ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.