4:57 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ; ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ಮಾಜಿ ಸಿಎಂ ಕುಮಾರಸ್ವಾಮಿ

28/04/2024, 22:51

ಬೆಂಗಳೂರು(reporterkarnataka.com): ಹಾಸನ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಬರುತ್ತಾರೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಎಸ್‌ಐಟಿಗೆ ತನಿಖೆಗೆ ಆದೇಶ ಮಾಡಿದ್ದಾರೆ ಎಂಬುದನ್ನು ಗಮನಿಸಿದ್ದೇನೆ. ನಾನು ಮತ್ತು ದೇವೇಗೌಡ ಅವರು ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವದಿಂದ ನಡೆದುಕೊಂಡಿದ್ದೇವೆ. ಕಷ್ಟದಲ್ಲಿ ಬರುವ ಹೆಣ್ಣು ಮಕ್ಕಳಿಗೆ ಸಹಾಯ ಮಾಡಿ ಗೌರವದಿಂದ ಕಂಡಿದ್ದೇವೆ. ಹಾಸನದ ಚುನಾವಣೆ ಸಂದರ್ಭದಲ್ಲಿ ಈ ಪ್ರಕರಣವು ಹೊರ ಬಂದಿದೆ. ಈ ಬಗ್ಗೆ ಸರಕಾರ ಎಸ್‌ಐಟಿ ತನಿಖೆಗೆ ಆದೇಶಿದ್ದು, ಅದರ ಸಂಪೂರ್ಣ ವರದಿ ಬರಲಿ.
ಈ ನೆಲದ ಕಾನೂನಿನಲ್ಲಿ ಅವರಿಗೆ ಶಿಕ್ಷೆಯಾಗಬೇಕು. ತನಿಖೆಯ ವರದಿ ಬಂದ ನಂತರ ನಾನು ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ನುಡಿದಿದ್ದಾರೆ.
ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣಾ ಅಖಾಡ ಅಣಿಯಾಗುತ್ತಿದ್ದಂತೆ
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ರಾಜ್ಯಾದ್ಯಂತ ವಿಶೇಷವಾಗಿ, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದವು.
ಈ ವಿಡಿಯೋ ತುಣುಕುಗಳು ಚುನಾವಣಾ ಪ್ರಚಾರ ಕಣದಲ್ಲಿ ದೊಡ್ಡ ಸದ್ದು ಮಾಡಿದ್ದವು. ಖಾಸಗಿ ಮೊಬೈಲ್‌ನಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋ ತುಣುಕುಗಳು ಸಾವಿರಾರು ಪೆನ್‌ಡ್ರೈವ್‌ಗಳ ಮೂಲಕ ಜನಸಾಮಾನ್ಯರನ್ನು ತಲುಪಿದ್ದರಲ್ಲಿ ಕೆಲವು ಪ್ರಮುಖ ನಾಯಕರ ಪಾತ್ರ ಇರುವ ಗುಮಾನಿಯ ಬಗ್ಗೆಯೂ ಕೇಳಿಬಂದಿದೆ.
.

ಇತ್ತೀಚಿನ ಸುದ್ದಿ

ಜಾಹೀರಾತು