1:07 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ?: ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….!

02/10/2022, 11:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಪ್ರಕೃತಿ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡುವ ದಂಧೆಗೆ ಇಳಿದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಏಕೆಂದರೆ, ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಜನ ಅರಣ್ಯ ಅಧಿಕಾರಿಗಳು ಜಿಲ್ಲೆ ಹಾಗೂ ನಾಡಿನ ಸುಪ್ರಸಿದ್ಧ ಪ್ರವಾಸಿ ತಾಣದಲ್ಲಿ ಅರಣ್ಯ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದ ಹೋರಾಟ ನಡೆಸಿದ್ದಾರೆ. ಬಲ್ಲಾಳರಾಯನ ದುರ್ಗದ ಸುತ್ತಮುತ್ತಲಿನ ಪ್ರದೇಶದ ಸೌಂದರ್ಯ ನೋಡೋ ಕಣ್ಗಳಿಗೆ ಹೊಸದೊಂದು ಪ್ರಪಂಚವನ್ನೇ ಉಣ ಬಡಿಸುವಂತಿದೆ. ಕಣ್ಣಿನ ದೃಷ್ಠಿ ಮುಗಿದರು ಹಚ್ಚಹಸಿರಿನ ಬೆಟ್ಟಗುಡ್ಡಗಳ ಸಾಲಿಗೆ ಕೊನೆ ಇಲ್ಲ. ತಣ್ಣನೆಯ ಗಾಳಿ. ಚುಮುಚುಮು ಚಳಿ. ಆಗಾಗ್ಗೆ ಪ್ರಕೃತಿ ಹಾಗೂ ಪ್ರವಾಸಿಗರ ಜೊತೆ ಮೋಡಗಳ ಕಣ್ಣಾಮುಚ್ಚಾಲೆ ಆಟ. ಇದೆಲ್ಲಾ ಪ್ರವಾಸಿಗರನ್ನ ಮಂತ್ರಮುಗ್ಧರನ್ನಾಗಿಸುತ್ತೆ. ವರ್ಷದ 365 ದಿನವೂ ನೂರಾರು ಪ್ರವಾಸಿಗರು ಇಲ್ಲಿನ ಸೌಂದರ್ಯವನ್ನ ಸವಿದು ಸೂಪರ್…. ಮಾರ್ವಲಸ್…. ಹಾರಿಬಲ್…. ಎಕ್ಸ್ಟ್ರಾಡಿನರಿ… ಅಂತೆಲ್ಲಾ ಇಲ್ಲಿನ ಸೌಂದರ್ಯಕ್ಕೆ ಫಿದಾ ಆಗಿ ಹೋಗುತ್ತಾರೆ. ಆದರೆ, ಇಲ್ಲಿಗೆ ಬರುವ ಪ್ರವಾಸಿಗರಿಗೆ ಕಿಂಚಿತ್ತು ಮೂಲಭೂತ ಸೌಕರ್ಯ ಇಲ್ಲ ಅನ್ನೋದು ನಂಬಲಾಗದ ಸತ್ಯ. 

ತಲೆಗೆ 300 ರೂಪಾಯಿ ಬೆಲೆ : ಈ ಸೌಂದರ್ಯ ರಾಶಿಯನ್ನ ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರಿಂದ ಕಳೆದ 4 ವರ್ಷಗಳಿಂದ ಅರಣ್ಯ ಹಾಗೂ ಪ್ರವಾಸೋಧ್ಯಮ ಇಲಾಖೆ ತಲಾ 305 ರೂಪಾಯಿ ಸಂಗ್ರಹ ಮಾಡುತ್ತಿದೆ. ಮಂತ್ಲಿ ನಿಯರ್ ಫೈವ್ ಲ್ಯಾಕ್ಸ್. ಆದರೆ, ಒಂದು ಶೌಚಾಲಯವಿಲ್ಲ. ವಿಶ್ರಾಂತಿ ಗೃಹವೂ ಇಲ್ಲ. ದಿನನಿತ್ಯ ನೂರಾರು ಗಾಡಿಗಳು ಓಡಾಡೋ ಹಳ್ಳಿಯಲ್ಲಿ ನಡೆದಾಡುವ ಸ್ಥಿತಿಯೂ ಇಲ್ಲ. ಹಾಗಾದರೆ, ಬಂದ ಹಣ ಎಲ್ಲಿ ಹೋಯಿತು ಅನ್ನೋದು ಯಕ್ಷ ಪ್ರಶ್ನೆಯಾಗೇ ಉಳಿದಿದೆ. ಈ ಬಗ್ಗೆ ಕಳೆದ ಎರಡು ವರ್ಷದಿಂದ ಸ್ಥಳಿಯರು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದ್ರು ನೋ ಯೂಸ್.  ಹಾಗಾಗಿ, ಪ್ರಕೃತಿ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಅರಣ್ಯ ಹಾಗೂ ಪ್ರವಾಸೋದ್ಯಮ ಇಲಾಖೆ ಪ್ರವಾಸಿಗರಿಂದ ಸುಲಿಗೆಗೆ ಇಳಿದಿದೆ ಎಂದು ಆರೋಪಿಸಿ ಸ್ಥಳಿಯರು ಇಲಾಖೆ ವಿರುದ್ಧ ಬೀದಿಗಳಿದು ಹೋರಾಟ ನಡೆಸಿದ್ದಾರೆ. ಯಾರೂ ಗುಡ್ಡಕ್ಕೆ ಹೋಗದಂತೆ ರಸ್ತೆಗೆ ಹಗ್ಗ ಕಟ್ಟಿ ಪ್ರತಿಭಟಿಸಿದ್ದಾರೆ. 

ಗ್ರಾಮ ಅರಣ್ಯ ಸಮಿತಿಗೆ ಸ್ಥಳಿಯರ ಮನವಿ : ಸರ್ಕಾರ ಕಳೆದ ಮೂರು ವರ್ಷಗಳಿಂದಲೂ “ಎಕೋ ಟೂರಿಸಂ” ಹೆಸರಲ್ಲಿ ಪ್ರವಾಸಿಗರಿಗೆ ಶುಲ್ಕ ವಿಧಿಸುತ್ತಿದೆ. ಆದರೆ, ಆ ಹಣ ಸರ್ಕಾರದ ಖಜಾನೆ ಸೇರುತ್ತಿದೆಯೋ ಇಲ್ಲ ಬೇರೆಲ್ಲಿಗೆ ಹೋಗುತ್ತಿದ್ಯೋ ಗೊತ್ತಿಲ್ಲ. ಆದರೆ, ಪ್ರವಾಸಿಗರಿಗೆ ಮೂಲಭೂತ ಸೌಲಭ್ಯವಂತೂ ಸಿಗುತ್ತಿಲ್ಲ. ಗ್ರಾಮಸ್ಥರು ಕೂಡ ಕಳೆದ ಮೂರು ವರ್ಷಗಳಿಂದಲೂ ಅರಣ್ಯ ಇಲಾಖೆ ಗ್ರಾಮ ಪಂಚಾಯಿತಿಯಡಿ ಗ್ರಾಮ ಅರಣ್ಯ ಸಮಿತಿಯ ಮೂಲಕ ಶುಲ್ಕ ವಿಧಿಸಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಜವಾಬ್ದಾರಿ ನೀಡಿ ಎಂದು ಮನವಿ ಮಾಡುತ್ತಿದ್ದಾರೆ. ಆದರೆ, ಅರಣ್ಯ ಇಲಾಖೆ ಯಾವುದಕ್ಕೂ ತಲೆಕೆಡಿಸಿಕೊಳ್ಳದ ಕಾರಣ ಸ್ಥಳಿಯರೇ ಸರ್ಕಾರದ ವಿರುದ್ಧ ಬೀದಿಗಳಿದು ಅಸಮಾಧಾನ ಹೊರಹಾಕಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು