3:33 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

01/02/2025, 18:18

ಬೆಂಗಳೂರು(reporterkarnataka.com): ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ್ ಭೇಟಿ ನೀಡಿದರು.
ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಇದರಂತೆಯೇ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆಗ್ರಹಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟಿಸಲು ಅವಕಾಶ ನೀಡದೇ ಇದ್ದಲ್ಲಿ ನಾನೇ ಬಂದು ಪ್ರತಿಭಟನೆಗೆ ಕೂರುತ್ತೇನೆ ಎಂದು ಎಚ್ಚರಿಕೆ ನೀಡಿದರು.


ಸಿಎಂ ಸಿದ್ದರಾಮಯ್ಯ ಯಾವ ಇಲಾಖೆಯಲ್ಲೂ ಹುದ್ದೆ ಭರ್ತಿ ಮಾಡಿಲ್ಲ. ಆದರೆ ಅವರ ಜೇಬು ಮಾತ್ರ ಭರ್ತಿಯಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದಂತೆಯೇ ಗೌರವಧನ ಹೆಚ್ಚಳ ಮಾಡಲು ಏಕೆ ಸಾಧ್ಯವಿಲ್ಲ? ಬೇರೆ ರಾಜ್ಯದ ಸಂತ್ರಸ್ತರಿಗೆ ಪರಿಹಾರ ನೀಡಲು ಹಣವಿದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹಣ ನೀಡುವಾಗ ಖಜಾನೆ ಖಾಲಿಯಾಗಿದೆ. ಇನ್ನು ಮೇಲೆ ಫ್ರೀ ಕೊಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ ಎಂದು ಅವರು ನುಡಿದರು.
ಜನರ ಮೇಲೆ ತೆರಿಗೆ ಹೇರಲಾಗಿದೆ. ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿಸಲಾಗಿದೆ. ಇಷ್ಟೆಲ್ಲ ಆದಾಯ ಬಂದರೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಹೇಗೂ ನಿರ್ಗಮಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರಿಗೆ ಸಹಾಯ ಮಾಡಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು