9:26 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ: ಹಲವು ಗಣ್ಯರ ಸಂತಾಪ

06/05/2024, 14:27

ಮಂಗಳೂರು(reporterkarnataka.com): ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಸೋಮವಾರ ನಗರದ ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಮುಂಜಾನೆ 3.30ಕ್ಕೆ ನಿಧನರಾದರು.
ಅವರಿಗೆ 69 ವರ್ಷ ವಯಸ್ಸಾಗಿತ್ತು. ಸಣ್ಣ ಕತೆ ಮತ್ತು ಲಲಿತ ಪ್ರಬಂಧ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ’ಶಿಕೇರಾಮ್, ಸುರತ್ಕಲ್’ ಕಾವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ. ಟಿ.ಎಮ್.ಎ. ಪೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿ ಸೊಜಾ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶೂ, ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್, ಕಟೀಲ್, ಕವಿ ಚಿಂತಕ್ ಟೈಟಸ್ ನೊರೊನ್ಹಾ, ಪತ್ರಕರ್ತ ಎಚ್.ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು