4:23 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ: ವಾರ್ಷಿಕ, ಪ್ರಾಯೋಗಿಕ ಪರೀಕ್ಷೆಗೆ ಡೇಟ್ ಫಿಕ್ಸ್

19/01/2022, 12:19

ಬೆಂಗಳೂರು(reporterkarnataka.com):

2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ  ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ  ಬಿಡುಗಡೆ ಮಾಡಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರುಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. 

2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ.

ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ 17-02-2022 ರಿಂದ 25-03-2022ರವರೆಗೆ ನಡೆಸಲು ನಿಗದಿಪಡಿಸಲಾಗಿದೆ. ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ 14-03-2022 ರಿಂದ 25-03-2022ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 16-04-2022 ರಿಂದ 04-05-2022ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿ

 ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸೋದಕ್ಕೆ 18-01-2022ರಿಂದ 01-02-2022ರವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇ-ಮೇಲ್ ಗೆ ಕಳಿಸುವಂತೆ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಿದ್ದು, ಪ್ರಸ್ತುತ ಇರುವ ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಹಾಗೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತ್ರ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ದಾಖಲಾಗಿ ಭವಿಷ್ಯ ರೂಪಿಸಿಕೊಳ್ಳೋ ನಿಟ್ಟಿನಲ್ಲಿ ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ.

ಭಾಷಾಯ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದು, ಶೆ.30ರಷ್ಟು ಪಠ್ಯಕ್ರಮಗಳನ್ನು  2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30ರಷ್ಟು ಪಠ್ಯಕ್ರಮಗಳನ್ನು ಕಡಿತಗಒಳಿಸಿದ್ದು, ಶೇ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲ. ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳು ನಡೆಯಲಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸೋ ಅವಕಾಶ ಕಲ್ಪಿಸಲಾಗಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಆಯಾ ಜಿಲ್ಲೆಯ ಉಪ ನಿರ್ದೇಶಕರ ನೇತೃತ್ವದಲ್ಲಿ ಸಿದ್ಧಪಡಿಸಿ, ದಿನಾಂಕ 28-03-2022 ರಿಂದ 13-04-2022ರವರೆಗೆ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.

ಪ್ರಥಮ ಪಿಯುಸಿ ಭಾಷಾ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದ ಶೇ.30ರಷ್ಟು ಪಠ್ಯಕ್ರಮವನ್ನು 2021-22ನೇ ಸಾಲಿನಲ್ಲಿಯೂ ಕಡಿತಗೊಳಿಸಲಾಗಿದೆ. ಐಚ್ಛಿಕ ವಿಷಯಗಳಲ್ಲಿ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು