5:06 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಪ್ರಥಮ ಪಿಯುಸಿಯಿಂದಲೇ `ಗೆಟ್-ಸೆಟ್-ಗೋ’ ತರಬೇತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

31/03/2022, 10:16

ಬೆಂಗಳೂರು(reporterkarnataka.com): JEE, NEET ಮತ್ತು CET ಪರೀಕ್ಷೆಯಲ್ಲಿ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ `ಗೆಟ್-ಸೆಟ್-ಗೋ (GetCETgo) ಆನ್ ಲೈನ್ ತರಬೇತಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು.

ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳು `ಡಿಜಿಲರ್ನ್’ ಎಡುಟೆಕ್ ಸಂಸ್ಥೆಯ ಜತೆಗೂಡಿ ರೂಪಿಸಿದೆ.

ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಲತಾಣ (www.getcetgo.in) ಅನಾವರಣಗೊಳಿಸಿ ಮಾತನಾಡಿದ ಅವರು,ಈ ವಿದ್ಯಾರ್ಥಿಸ್ನೇಹಿ ಉಪಕ್ರಮದ ಲಾಭವು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿಯಿಂದಲೇ ಸಿಗುವಂತೆ ಮಾಡಲಾಗುವುದು. ಈ ಸಂಬಂಧ ಕಂಪನಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.

ಇದನ್ನು ಜಾಲತಾಣದ ಜತೆಗೆ ಆಯಪ್ ಮೂಲಕವೂ ಈ ಪ್ರಯೋಜನ ಪಡೆಯಬಹುದಾಗಿದ್ದು, ಇದನ್ನು ಗೂಗಲ್ ಪ್ಲೇಸ್ಟೋರಿನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಲ್ಲದೆ, ಯೂಟ್ಯೂಬ್ ಮೂಲಕವೂ ಇದರ ವಿಡಿಯೋಗಳನ್ನು ವೀಕ್ಷಿಸಬಹುದು., ಕಳೆದ ಎರಡು ವರ್ಷಗಳಲ್ಲಿ ಈ ವೇದಿಕೆಯು 3.50 ಲಕ್ಷಕ್ಕೂ ಹೆಚ್ಚು ಲಾಗಿನ್ ಕಂಡಿದೆ’ ಎಂದು ಅವರು ತಿಳಿಸಿದರು.

ಇನ್ನು `ಗೆಟ್ ಸೆಟ್ ಗೋ’ ಜಾಲತಾಣದಲ್ಲಿ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಒಮ್ಮೆ ನೋಂದಾಯಿಸಿಕೊಂಡರೆ ಓದಿನ ಪುನರ್ಮನನಕ್ಕೆ ಅನುಕೂಲವಾಗುವ ವಿಡಿಯೋಗಳು, ಸಾರರೂಪದ ಪಿ.ಪಿ.ಟಿ.ಗಳು, ಅಭ್ಯಾಸ ಪ್ರಶ್ನೆಗಳು, ಅಧ್ಯಾಯವಾರು ಪರೀಕ್ಷೆಗಳು, ಅಣಕು ಪರೀಕ್ಷೆಗಳು ಎಲ್ಲವೂ ಉಚಿತವಾಗಿ ಸಿಗುತ್ತವೆ. ಜತೆಗೆ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಯನ್ನು ಎದುರಿಸಿ, ತಮ್ಮ ಅಂಕ ಮತ್ತು ಸ್ಥಾನಗಳನ್ನು ತಿಳಿದುಕೊಳ್ಳಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎನ್.ರವಿಚಂದ್ರನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು