ಇತ್ತೀಚಿನ ಸುದ್ದಿ
ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಂಗಳೂರಿಗೆ ಭೇಟಿ: ಚೂರಿ ಇರಿತಕ್ಕೊಳಗಾದವರ ಆರೋಗ್ಯ ವಿಚಾರಣೆ
12/06/2024, 15:09
ಮಂಗಳೂರು(reporterkarnataka.com): ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಬಿಜೆಪಿ ಕಾರ್ಯಕರ್ತ ರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಯೋಗಕ್ಷೇಮ ವಿಚಾರಿಸಿದರು.
ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಭೇಟಿದ ಅವರು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ನಂದಕುಮಾರ್ ಅವರ ಆರೋಗ್ಯ ವಿಚಾರಿಸಿ ಘಟನೆಯ ಬಗ್ಗೆ ವಿವರಣೆ ಪಡೆದರು.ಸಂಸದ ಬ್ರಿಜೇಶ್ ಚೌಟ,, ಶಾಸಕರಾದ ಡಾ.ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.