ಇತ್ತೀಚಿನ ಸುದ್ದಿ
ಪ್ರತಿಭಾ ಕಾರಂಜಿ: ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟಕ್ಕೆ ಆಯ್ಕೆ
18/11/2024, 09:49

ಮಂಗಳೂರು(reporterkarnataka.com):ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾಳೆ. ಮಂಗಳೂರು ಸಂತ ಅಲೋಷಿಯಸ್ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿಯಾದ ಆಕೆ ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಥೆ ಹೇಳುವ ವಿಭಾಗದಲ್ಲಿ ಗಮನ ಸೆಳೆದಿದ್ದು, ಆಕೆಯ ಸಾಧನೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.
ಮೇಧ್ಯಾ ಕೊಟ್ಟಾರಿ, ಮಂಗಳೂರಿನ ವಕೀಲರಾದ ಚಂದ್ರಹಾಸ ಕೊಟ್ಟಾರಿ ಮತ್ತು ಪ್ರೇಮಲತಾ ದಂಪತಿಯ ಪುತ್ರಿ.
ಮೇಧ್ಯಾ ಕೊಟ್ಟಾರಿ ಈಗಾಗಲೇ ಜಿಲ್ಲೆಯಲ್ಲಿ ನಡೆದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದು, ಬಾಲ ಕಲಾವಿದೆಯ ಸಾಧನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.