ಇತ್ತೀಚಿನ ಸುದ್ದಿ
ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ: ದಿಲ್ಲಿಯ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು
26/05/2022, 18:53
ಶ್ರೀನಗರ(reporterkarnataka.com): ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ವಿಶೇಷ ಜಡ್ಜ್ ಪ್ರವೀಣ್ ಸಿಂಗ್ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.
2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.