ಇತ್ತೀಚಿನ ಸುದ್ದಿ
ಪ್ರವಾಹ ಪರಿಸ್ಥಿತಿ: ಜಮಖಂಡಿ- ಮೀರಜ್ ಅಂತರ್ ರಾಜ್ಯ ಹೆದ್ದಾರಿ ಜಲಾವೃತ; ಕೃಷ್ಣಾ ಸೇರಿದ 1 ಲಕ್ಷ ಕ್ಯೂಸೆಕ್ಸ್ ನೀರು
23/07/2021, 22:52
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿದೆ.
ಮಹಾರಾಷ್ಟ್ರದಿಂದ 1 ಲಕ್ಷ ಕ್ಯೂಸೆಕ್ಸ್ ಗೂ ಅಧಿಕ ನೀರು ಕೃಷ್ಣಾ ನದಿಗೆ ಹರಿದು ಬಂದಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಪ್ರವಾಹದ ಸ್ಥಿತಿ ತಲೆ ದೋರಿದೆ.
ನೀರು ಹೆಚ್ಚಳದಿಂದ ರಾಜ್ಯ ಹೆದ್ದಾರಿ ಸಂಪರ್ಕ ಸ್ಥಗಿತಗೊಂಡಿದೆ.
ಕುಡಚಿ- ಉಗಾರ ಮದ್ಯದ ಸೇತುವೆ ಕೂಡ ಜಲಾವೃತ್ತಗೊಂಡಿದೆ. ಜಮಖಂಡಿ- ಮೀರಜ್ ನ ಮುಖ್ಯ ಅಂತರ್ ರಾಜ್ಯ ಹೆದ್ದಾರಿ ಬಂದ್ ಆಗಿದೆ.
ಪೋಲಿಸ್ ಇಲಾಖೆಯಿಂದ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಕಾವಲು ಕಾಯಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಸೇತುವೆ ಕೂಡ ಜಲಾವೃತಗೊಂಡಿದೆ.