2:54 PM Tuesday3 - November 2026
ಬ್ರೇಕಿಂಗ್ ನ್ಯೂಸ್
Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ…

ಇತ್ತೀಚಿನ ಸುದ್ದಿ

ಪ್ರವಾಹ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಂಜುಂಡೇಶ್ವರನಿಗೆ ಜಲದಿಗ್ಬಂಧನ

19/07/2024, 21:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೇರಳದ ವಯನಾಡು ಹಾಗೂ ಕಪಿಲಾ ನದಿ ಪ್ರಾಂತ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕಬಿನಿ ಜಲಾಶಯದಿಂದ ಸುಮಾರು 60 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿದೆ. ಈ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿಯ ಪ್ರವಾಹ ದೇವಾಲಯದ ಸಮೀಪದವರೆಗೂ ಹರಿದು ಬಂದಿದೆ.
ದೇವಾಲಯದ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನುಗ್ಗಿರುವ ನೀರು ಒಂದು ರೀತಿ ಜಲ ದಿಗ್ಬಂಧನ ಹಾಕಿದಂತಿದೆ.


ಪ್ರವಾಹದಿಂದಾಗಿ ಐತಿಹಾಸಿಕ ಹಳೆ ಸೇತುವೆ, ಹದಿನಾರುಕಾಲು ಮಂಟಪ, ಪರಶುರಾಮ ದೇವಾಲಯ, ಅಯ್ಯಪ್ಪ ಸ್ವಾಮಿ, ದೇವಾಲಯ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠ, ಲಿಂಗಾಭಟರ ಗುಡಿ, ಚಾಮುಂಡೇಶ್ವರಿ ದೇವಾಲಯ, ಸೇರಿದಂತೆ ಪಟ್ಟಣದ ಹಳ್ಳದ ಕೇರಿ, ತೋಪಿನ ಬೀದಿಗಳಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ಎಚ್ಚೆತ್ತ ಜಿಲ್ಲಾ ಮತ್ತು ತಾಲೂಕ ಆಡಳಿತ ಮುಂಜಾಗ್ರತಾ ಕ್ರಮ ಕೈಗೊಂಡು ತಗ್ಗು ಪ್ರದೇಶದ ಹಾಗೂ ಮುಳುಗಡೆಯಾದ ಮನೆಗಳ ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳನ್ನು ತೆರೆದು ಆಶ್ರಯ ನೀಡಲಾಗಿದೆ.
ನಂಜನಗೂಡಿನ ನೆರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ತಹಶೀಲ್ದಾರ್ ಶಿವಕುಮಾರ್ ಕಾಸನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಳೆಯು ಹೀಗೆ ಮುಂದುವರೆದರೆ ಇನ್ನೂ ಅಪಾಯದ ಮಟ್ಟ ಮೀರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು