1:35 PM Thursday11 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಎನ್​ಐಎ ತಂಡದಿಂದ 4ನೇ ಆರೋಪಿಯ ಸಕಲೇಶಪುರದಲ್ಲಿ ಬಂಧನ

10/05/2024, 13:33

ಮಂಗಳೂರು(reporterkarnataka.com): ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು ಎನ್​ಐಎ ತಂಡ ಬಂಧಿಸಿದೆ.
ಸುಳ್ಯದ‌ ಶಾಂತಿ ನಗರ ನಿವಾಸಿಯಾದ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್​ಐಎ ತಂಡ ಹಾಸನದ‌ ಸಕಲೇಶಪುರ ಬಳಿ ದಸ್ತಗಿರಿ ಮಾಡಿದೆ. ಈತ ಪಿಎಫ್ಐ ಮುಖಂಡ ಎನ್ನಲಾಗಿದೆ. ಆರೋಪಿಯು ಹಾಸನ ಜಿಲ್ಲೆಯ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡಿದ್ದ. ಎನ್​ಐಎ ಇನ್ಸ್ ಪೆಕ್ಟರ್ ಷಣ್ಮುಗಂ ಅವರ ತಂಡ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದರು.ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆಯತ್ತ ಕೊಂಡೊಯ್ದಿದ್ದಾರೆ.
ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಆರೋಪಿ ಮುಸ್ತಫಾ ಪೈಚಾರ್ ತಲೆಮರೆಸಿಕೊಂಡಿದ್ದು ಹೀಗಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು